ಆದರ್ಶ ವಿದ್ಯಾಲಯಗಳ ಪ್ರವೇಶ ಪರೀಕ್ಷೆ: ನಿಷೇಧಾಜ್ಞೆ ಜಾರಿ:ಜಿಲ್ಲಾಧಿಕಾರಿ

ಕೊಪ್ಪಳ:೨೦೨೦-೨೧ನೇ ಸಾಲಿನ ಆದರ್ಶ ವಿದ್ಯಾಲಯಗಳ ೬ನೇ ತರಗತಿಗಳ ಪ್ರವೇಶ ಪರೀಕ್ಷೆಗಳು, ಜು.೨೭ ರಂದು ಬೆಳಿಗ್ಗೆ ೧೦:೩೦ ರಿಂದ ಮಧ್ಯಾಹ್ನ ೦೧ ಗಂಟೆಯವರೆಗೆ ಕೊಪ್ಪಳ ಜಿಲ್ಲೆಯ ೩೬ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳು ದೋಷರಹಿತವಾಗಿ, ಸುಗಮ ಹಾಗೂ ಶಾಂತಿಯುತವಾಗಿ ನಡೆಯುವ ಉದ್ದೇಶದಿಂದ ಸಿ.ಆರ್.ಪಿ.ಸಿ ೧೯೭೩ ರ ಕಲಂ ೧೪೪ ರನ್ವಯ ಪರೀಕ್ಷಾ ಕೇಂದ್ರದ ಸುತ್ತಲೂ ೨೦೦ ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ಆದೇಶ ಹೊರಡಿಸಿದ್ದಾರೆ.
ಆದೇಶದನ್ವಯ ನಿಷೇಧಿತ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಮೊಬೈಲ್, ಪೇಜರ್, ಜೆರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ. ಪರೀಕ್ಷೆಯಲ್ಲಿ ಪ್ರವೇಶ ಪತ್ರ ಹೊಂದಿದ ವಿದ್ಯಾರ್ಥಿಗಳು ಹಾಗೂ ನಿಯೋಜಿತ ಶಿಕ್ಷಕರನ್ನು, ಜಾಗೃತ ದಳದವರನ್ನು ಹೊರತುಪಡಿಸಿ ಇನ್ನುಳಿದವರಿಗೆ ಪರವಾನಿಗೆ ಇಲ್ಲದೇ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವುದನ್ನು ನಿಷೇಧಿಸಲಾಗಿದೆ. ನಿಷೇಧಿತ ವ್ಯಾಪ್ತಿಯಲ್ಲಿ ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವುದನ್ನು ನಿಷೇಧಿಸಿದೆ. ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.
ಪರೀಕ್ಷಾ ಕೇಂದ್ರಗಳ ವಿವರಗಳು:
ಕುಷ್ಟಗಿ ತಾಲ್ಲೂಕಿನ ಆದರ್ಶ ವಿದ್ಯಾಲಯ ತಳವಗೇರಾ, ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜು ಹನುಮಸಾಗರ, ಕುಷ್ಟಗಿಯ ಶ್ರೀ ಚನ್ನಬಸವೇಶ್ವರ ಪ್ರೌಢಶಾಲೆ ಕುಷ್ಟಗಿ ತೆಗ್ಗಿ, ಶ್ರೀ ವಿಜಯಚಂದ್ರಶೇಖರ ಪ್ರೌಢಶಾಲೆ, ಎನ್.ಎಚ್., ಸರ್ಕಾರಿ ಬಾಲಕಿಯರ(ಪ್ರೌಢಶಾಲೆ) ಪದವಿಪೂರ್ವ ಕಾಲೇಜು ಕೊಪ್ಪಳ ರೋಡ್, ಶ್ರೀ ಬುತ್ತಿ ಬಸವೇಶ್ವರ ಪದವಿಪೂರ್ವ ಕಾಲೇಜು, ಕ್ರಿಸ್ಟ್ ದ ಕಿಂಗ್ ಪ್ರೌಢಶಾಲೆ ಗಜೇಂದ್ರಗಡ ರೋಡ್, ನೋಬಲ್ ಕಾನ್ವೆಂಟ್ ಪ್ರೌಢಶಾಲೆ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕನ್ಯಾ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾನಗರ, ಶ್ರೀ ಗವಿಸಿದ್ದೇಶ್ವರ ಪ್ರೌಢಶಾಲೆ, ಶ್ರೀ ಅನ್ನದಾನೇಶ್ವರ ಪದವಿ ಪೂರ್ವ ಕಾಲೇಜು ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ.
ಕೊಪ್ಪಳ ನಗರದ ಜಿ.ಎಮ್.ಎಚ್.ಪಿ. ಶಾಲೆ, ಎಸ್.ಎಫ್.ಎಸ್ ಶಾಲೆ, ಗವಿಸಿದ್ದೇಶ್ವರ ಪ್ರೌಢಶಾಲೆ, ಶಿವಶಾಂತವೀರ ಪಬ್ಲಿಕ್ ಸ್ಕೂಲ್, ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು, ಲಯನ್ಸ್ ಸ್ವಾಮಿ ವಿವೇಕಾನಂದ ಸ್ಕೂಲ್, ಕಾಳಿದಾಸ ಪ್ರೌಢಶಾಲೆ, ಜಿ.ಎಚ್.ಪಿ.ಎಸ್. ಸರದಾರಗಲ್ಲಿ, ಮಾಸ್ತಿ ಪಬ್ಲಿಕ್ ಶಾಲೆ, ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು(ಪ್ರೌಢಶಾಲೆ) ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ.
ಯಲಬುರ್ಗಾದ ಸರಕಾರಿ ಬಾಲಕಿಯರ ಪ್ರೌಢಶಾಲೆ, ಸರ್ಕಾರಿ ಜೂನಿಯರ್ ಕಾಲೇಜು, ಎಸ್.ಎ.ನಿಂಗೋಜಿ ಸೆಂಟ್ರಲ್ ಪಬ್ಲಿಕ್ ಸ್ಕೂಲ್ ಮತ್ತು ಪ್ರೌಢಶಾಲೆ, ಶ್ರೀ ಸಿದ್ದರಾಮೇಶ್ವರ ಪ್ರೌಢಶಾಲೆ, ಸರಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆ(ಎಮ್‌ಎಲ್‌ಎ), ಸರಕಾರಿ ಜ್ಯೂನಿಯರ್ ಕಾಲೇಜು(ಕಾಲೇಜು ವಿಭಾಗ), ಜ್ಞಾನಸಾಗರ ಹಿರಿಯ ಪ್ರಾಥಮಿಕ ಶಾಲೆ, ಶ್ರೀ ಮಂಜುನಾಥ ಪ್ರೌಢಶಾಲೆ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ.
ಗಂಗಾವತಿಯ ಸರಕಾರಿ ಜ್ಯೂನಿಯರ್ ಕಾಲೇಜು, ಎನ್.ಎಮ್.ಎನ್ ಸರ್ಕಾರಿ ಪ್ರೌಢಶಾಲೆ, ಸರಕಾರಿ ಪ್ರೌಢಶಾಲೆ(ಉರ್ದು), ಶ್ರೀ ಕೊಟ್ಟೂರೇಶ್ವರ ಪದವಿ ಪೂರ್ವ ಕಾಲೇಜು, ಶ್ರೀಮತಿ .ಎಚ್.ಆರ್. ಸರೋಜಮ್ಮ ಪದವಿ ಪೂರ್ವ ಕಾಲೇಜು, ಜೆ.ಎಸ್.ಎಸ್. ಪ್ರೌಢಶಾಲೆ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ ಎಂದು ಪ್ರಕಟಣೆ ತಿಳಿಸಿದೆ.

Please follow and like us:

Leave a Reply

Your email address will not be published. Required fields are marked *

WhatsApp
error: Content is protected !!