ಏಪ್ರಿಲ್ 30 ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಕೊಪ್ಪಳ: ಕೆ.ಎಸ್.ಆರ್.ಟಿ.ಸಿ ನೌಕರರ ಕೂಟ ವತಿಯಿಂದ ಏಪ್ರಿಲ್ 07 ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗಿದ್ದು, ನೌಕರರ ಒಕ್ಕೂಟದ ಮುಖಂಡರು ಪ್ರತಿದಿನ ಒಂದೊAದು ರೀತಿಯ ಚಳುವಳಿಯನ್ನು ಹಮ್ಮಿಕೊಳ್ಳುತ್ತಿರುವುದರಿಂದ ಮುಷ್ಕರದ ಸಮಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ಜಿಲ್ಲೆಯ , ವಿಭಾಗೀಯ ಕಚೇರಿ, ವಿಭಾಗೀಯ ಕಾರ್ಯಾಗಾರತಹಶೀಲ್ದಾರರ ಕಚೇರಿ, ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ಜಿಲ್ಲೆಯಲ್ಲಿ ಬರುವ ಎನ್.ಇ.ಕೆ.ಎಸ್.ಆರ್.ಟಿ.ಸಿ ಡಿಪೋ ಮತ್ತು ಬಸ್ ನಿಲ್ದಾಣಗಳ ಸುತ್ತಲೂ 200 ಮೀಟರ್ ಅಂತರದಲ್ಲಿ ಏಪ್ರಿಲ್ 19 ರ ರಾತ್ರಿ 10 ಗಂಟೆಯಿAದ ಏ.30 ರ ರಾತ್ರಿ 10 ಗಂಟೆಯವರೆಗೆ ಅಪರಾಧಿಕ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144 ರಡಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ಆದೇಶ ಹೊರಡಿಸಿದ್ದಾರೆ.
 ಕೆ.ಎಸ್.ಆರ್.ಟಿ.ಸಿ ನೌಕರರ ಒಕ್ಕೂಟದ ಮುಖಂಡರು ಏ.20 ರಂದು ನೌಕರರು ಸ್ವಯಂ ಪ್ರೇರಿತವಾಗಿ ನಿಯಮಗಳನ್ನು ಉಲ್ಲಂಘಿಸಿ ಬಂಧನಕ್ಕೊಳಗಾಗುವ ಮೂಲಕ ಜೈಲ್ ಭರೋ ಚಳುವಳಿ ಹಮ್ಮಿಕೊಂಡಿರುವ ಮಾಹಿತಿ ತಿಳಿದು ಬಂದಿರುವ ಹಿನ್ನೆಲೆಯಲ್ಲಿ ಹಾಗೂ ನೌಕರರ ಒಕ್ಕೂಟವು ದಿನವೊಂದಕ್ಕೆ ಬೇರೆ ಬೇರೆ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮುಷ್ಕರವನ್ನು ಮುಂದುವರೆಸಿರುವುದರಿAದ ಸಂಸ್ಥೆಯ ಆಸ್ತಿ-ಪಾಸ್ತಿ ಹಾನಿಯಾಗದಂತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಈ ಆದೇಶವನ್ನು ಹೊರಡಿಸಲಾಗಿದೆ.
 ಆದೇಶದನ್ವಯ 200 ಮೀಟರ್ ಅಂತರದಲ್ಲಿ ಜನರು ಗುಂಪಾಗಿ ಸೇರುವುದನ್ನು ನಿಷೇಧಿಸಿದೆ. ಬಸ್ ನಿಲ್ದಾಣಕ್ಕೆ ಬರುವ ಪ್ರಯಾಣಿಕರಿಗೆ ತೊಂದರೆ ಮಾಡಬಾರದು. ಬಸ್ ನಿಲ್ದಾಣಕ್ಕೆ ಬಂದು ಹೋಗುವ ಖಾಸಗಿ ವಾಹನಗಳಿಗೆ ಯಾವುದೇ ಹಾನಿ ಮಾಡಬಾರದು. ಬಸ್ ನಿಲ್ದಾಣದಲ್ಲಿ ಧರಣಿ ಹಾಗೂ ಘೋಷಣೆಗಳನ್ನು ಕೂಗುವುದನ್ನು ನಿಷೇಧಿಸಿದೆ. ಬಸ್ ನಿಲ್ದಾಣಕ್ಕೆ ಖಾಸಗಿ ವಾಹನಗಳು ಸಾರ್ವಜನಿಕರು ಸಾಗಾಟ ಮಾಡಲು ಬಂದರೆ ಅಡ್ಡಿಪಡಿಸಬಾರದು. ಶವಾಕೃತಿ ಅಥವಾ ಪ್ರತಿಮೆಗಳನ್ನು ಪ್ರದರ್ಶನ ಮಾಡುವುದನ್ನು ಪ್ರತಿಬಂಧಿಸಲಾಗಿದೆ. ಈ ಆದೇಶ ಉಲ್ಲಂಘಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

WhatsApp
error: Content is protected !!