ಕಚ್ಚಾ ತೈಲದ ದರ ಕಡಿಮೆಇದ್ದರೂ ಪೆಟ್ರೋಲ್,ಡೀಸೆಲ್ ಬೆಲೆ ಹೆಚ್ಚುತ್ತಿದೆ: ತಂಗಡಗಿ

ಕೋಪ್ಪಳ: ಪೆಟ್ರೋಲ್, ಡೀಸೆಲ್ ಸೇರಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಕೇಂದ್ರ ಸರ್ಕಾರ ಜನರ ಗಾಯದ ಮೇಲೆ ಬರೆ ಎಳೆಯುತ್ತಿದೆ’ ಎಂದು ಮಾಜಿ ಸಚಿವ ಶಿವರಾಜ್ ತಂಗಡಗಿ ಆರೋಪಿಸಿದರು.ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳ ವಿರುದ್ಧ ನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ನಡೆದ ಪ್ರತಿಭಟನೆಗೆ ಸಂಬಂಧಿಸಿದ ಸೈಕಲ್ ಜಾಥಾದಲ್ಲಿ ಪಾಲ್ಗೊಂಡು ಬಳಿಕ ಮಾತನಾಡಿದರು.
ದೇಶದ ಬಡವರ ಮೇಲೆ ಕೇಂದ್ರ ಸರ್ಕಾರ ಆರ್ಥಿಕ ಹೊರೆ ಹೊರಿಸಿದೆ ಎಂದರು.
ಯುಪಿಎ ಸರ್ಕಾರದ ಅವಧಿಯಲ್ಲಿ ಕಚ್ಚಾ ತೈಲ ಬೆಲೆ ಹೆಚ್ಚಿದ್ದರೂ ದೇಶದಲ್ಲಿ ಇಂಧನ ಬೆಲೆ ಹೆಚ್ಚಳವಾಗಿರಲಿಲ್ಲ. ಆದರೆ ಈಗ ಅದಕ್ಕೆ ವಿರುದ್ಧವಾಗಿ ಅಂದರೆ ಕಚ್ಚಾ ತೈಲದ ದರ ಬಹಳಷ್ಟು ಕಡಿಮೆಯಾಗಿದ್ದರೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚುತ್ತಿದೆ.
ಇಂಧನ ಬೆಲೆಯಲ್ಲಿನ ಹೆಚ್ಚಳದಿಂದ ಸಹಜವಾಗಿ ಅಗತ್ಯವಸ್ತುಗಳ ದರವೂ ಗಗನಕ್ಕೆ ಏರುತ್ತಿದೆ. ಇದು ಬಡವರು ಮತ್ತು ಜನಸಾಮಾನ್ಯರ ಮೇಲೆ ಮತ್ತಷ್ಟು ಆರ್ಥಿಕ ಹೊರೆ ಹೊರಿಸಿದ್ದು, ಬಿಜೆಪಿ ಸರ್ಕಾರಗಳ ವಿರುದ್ಧ ಜನರು ಬಂಡೇಳುವಂಥ ಸ್ಥಿತಿ ನಿರ್ಮಾಣವಾಗಿದೆ ಎಂದರು.
ಬಡವರಿಗೆ ಅಡುಗೆ ಅನಿಲ ಸಂಪರ್ಕ ಕಲ್ಪಿಸಿದ ಬಿಜೆಪಿ ಸರ್ಕಾರ ಈಗ ಸಿಲಿಂಡರ್ ದರವನ್ನೂ ಹೆಚ್ಚಿಸಿದ್ದರಿಂದ ಬಹುತೇಕ ಬಡ ಕುಟುಂಬದವರು ಅಡುಗೆ ಅನಿಲ ಸಿಲಿಂಡರ್ ಬಳಸುವುದನ್ನು ಕೈಬಿಟ್ಟಿದ್ದಾರೆ. ಮಂನ್ ಮೋಹನ್ ಸಿಂಗ್ ಪ್ರಾಧನಿಯಾಗಿದ್ದಾಗ ಎಲ್‌ಪಿಜಿ ಸಿಲಿಂಡರನ ಬೆಲೆ ೪೫೦ ರೂಪಾಯಿ ಇತ್ತು ಆದರೆ ಈಗ ೯೫೦ ರುಪಾಯಿಯಾಗಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜನ ವಿರೋಧಿ ನೀತಿ ಅನುಸರಿಸುತ್ತಿದ್ದರೆ, ಇತ್ತ ಯಡಿಯೂರಪ್ಪ ಅವರ ರಾಜ್ಯ ಸರ್ಕಾರ ಭ್ರಷ್ಟಾಚಾರ, ಸ್ವಜನ ಪಕ್ಷಪಾತ,ಆಂತರಿಕ ಕಚ್ಚಾಟದಿಂದ ಅಧೋಗತಿಗೆ ಇಳಿದಿದ್ದು ಜನ ಬಿಜೆಪಿಯನ್ನು ಬೆಂಬಲಿಸಿದ್ದಕ್ಕೆ ಪಶ್ಚಾತಾಪಡುವಂತಾಗಿದೆ. ಮುಂಬರುವ ಚುನಾವಣೆಯಲ್ಲಿ ಬಿಜೆಪಿಗೆ ಮತದಾರರು ತಕ್ಕ ಪಾಠ ಕಲಿಸುತ್ತಾರೆ ಎಂದು ತಂಗಡಗಿ ಹೇಳಿದರು.

ಮಾಜಿ ಸಚಿವ ಬಸವರಾಜ್ ರಾಯರಡ್ಡಿ ಸೇರಿದಂತೆ ಇತರರು ಮಾತನಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬಸವರಾಜ್ ರಾಯರಡ್ಡಿ ಮೊದಿ ಪ್ರದಾನಿ ಅಗುವ ಮೋದಲು ೩೦ ರುಪಾಯಿಗೆ ಲೀಟರ್ ಪೆಟ್ರೋಲ್ ನೀಡುತ್ತೆವೆ ಮತ್ತು ಪ್ರತಿಯೋಬ್ಬರ ಖಾತೆಗೆ ಹದಿನೈದು ಲಕ್ಷ ರುಪಾಯಿ ಹಣವನ್ನು ನೀಡುತ್ತೆನೆ ಎಂಬ ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದರು. ಡಾಲರ್ ಮತ್ತು ರುಪಾಯಿಯನ್ನು ಇಕೋಲ್ ಮಾಡುತ್ತೆವೆ ಎಂದು ಪೆಟ್ರೋಲ್- ಡೀಸೆಲ್ ಬೆಲೆ ಇಕೋಲ್ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಶಿವರಾಜ್ ತಂಗಡಗಿ, ಬಸವರಾಜ್ ರಾಯರಡ್ಡಿ, ರಾಜಶೇಕರ ಹಿಟ್ನಾಳ್ ಮತ್ತು ನಗರ ಸಭೆಯಸದ್ಯಸಯ ಅಜ್ಮಾದ್ ಪಟೇಲ್ ಹಾಗೂ ಕಾಂಗ್ರೆಸ್ ಪಕ್ಷದ ಸದಸ್ಯರು, ಇತರೆ ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಬಸವರಾಜ್ ರಾಯರಡ್ಡಿ ಮೊದಿ ಪ್ರದಾನಿ ಅಗುವ ಮೋದಲು ೩೦ ರುಪಾಯಿಗೆ ಲೀಟರ್ ಪೆಟ್ರೋಲ್ ನೀಡುತ್ತೆವೆ ಮತ್ತು ಪ್ರತಿಯೋಬ್ಬರ ಖಾತೆಗೆ ಹದಿನೈದು ಲಕ್ಷ ರುಪಾಯಿ ಹಣವನ್ನು ನೀಡುತ್ತೆನೆ ಎಂಬ ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದರು. ಡಾಲರ್ ಮತ್ತು ರುಪಾಯಿಯನ್ನು ಇಕೋಲ್ ಮಾಡುತ್ತೆವೆ ಎಂದು ಪೆಟ್ರೋಲ್- ಡೀಸೆಲ್ ಬೆಲೆ ಇಕೋಲ್ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.ಈ ಸಂದರ್ಭದಲ್ಲಿ ಶಿವರಾಜ್ ತಂಗಡಗಿ, ಬಸವರಾಜ್ ರಾಯರಡ್ಡಿ, ರಾಜಶೇಕರ ಹಿಟ್ನಾಳ್ ಮತ್ತು ನಗರ ಸಭೆಯಸದ್ಯಸಯ ಅಜ್ಮಾದ್ ಪಟೇಲ್ ಹಾಗೂ ಕಾಂಗ್ರೆಸ್ ಪಕ್ಷದ ಸದಸ್ಯರು, ಇತರೆ ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು

Please follow and like us:

Leave a Reply

Your email address will not be published. Required fields are marked *

WhatsApp
error: Content is protected !!