ಕಾಂಗ್ರೆಸ್ ಕಚೇರಿ ನಿರ್ಮಾಣಕ್ಕೆ 8.02 ರೂಪಾಯಿ ದೇಣಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿಗೆ ಹಸ್ತಾಂತರ
ಬಳ್ಳಾರಿ : ಕಾಂಗ್ರೆಸ್ ಕಚೇರಿ ನಿರ್ಮಾಣಕ್ಕೆ ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆಯ ಆಕಾಂಕ್ಷಿಗಳು ಕೊಡಮಾಡಿರುವ 8.02 ಲಕ್ಷ ರುಪಾಯಿ ದೇಣಿಗೆಯ ಚೆಕ್ ಗಳನ್ನು ಜಿಲ್ಲಾಧ್ಯಕ್ಷ ಜಿ.ಎಸ್. ಮೊಹಮ್ಮದ್ ರಫಿ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ಹಸ್ತಾಂತರಿಸಿದರು. ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್, ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಈಶ್ವರ್ ಖಂಡ್ರೆ, ವಿಧಾನಸಭೆ ಕಾಂಗ್ರೆಸ್ ಮುಖ್ಯ ಸಚೇತಕ ಅಜಯ್ ಸಿಂಗ್, ಮಾಜಿ ಸಂಸದ ಉಗ್ರಪ್ಪ, ಮಾಜಿ ಸಚಿವರಾದ ಅಲ್ಲಂ ವೀರಭದ್ರಪ್ಪ, ಸಂತೋಷ ಲಾಡ್, ತುಕಾರಾಂ, ಪಿ.ಟಿ. ಪರಮೇಶ್ವರ ನಾಯಕ್, ರಾಜ್ಯಸಭೆ ಸದಸ್ಯ ನಾಸಿರ್ ಹುಸೇನ್ ಮತ್ತಿತರ ಮುಖಂಡರು ಹಾಜರಿದ್ದರು.
Please follow and like us: