ಕಾಂಗ್ರೆಸ್ ಸರ್ಕಾರದ ಆಡಳಿತ ಅವಧಿಯಲ್ಲಿನ ಜನಪರ ಯೋಜನೆಗಳೇ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಕಾರಣ : ಹಂಪನಗೌಡ ಬಾದರ್ಲಿ

ಅಖಿಲ ವಾಣಿ ಸುದ್ದಿ
ಸಿಂಧನೂರು : ಮಸ್ಕಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಕ್ಷೇತ್ರದ ಮತದಾರರು ಬಿಜೆಪಿ ಪಕ್ಷದ ಹಾಗೂ ಸರ್ಕಾರದ ಸುಳ್ಳು ಭರವಸೆಗಳಿಗೆ ಮರುಳ ಆಗದೆ.ಹಣ ಆಮಿಷ್ಯಗಳಿಗೆ ಬಲಿಯಾಗದೆ ಜನ ಬಲಕ್ಕೆ ಶಕ್ತಿ ಕೊಟ್ಟು. ಈ ಹಿಂದೆ ರಾಜ್ಯದಲ್ಲಿ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ನವರ ಆಡಳಿತದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಜಾರಗೊಳಿಸಲಾಗಿದ್ದ ಜನಪರ ಯೋಜನೆಗಳೇ ಮಸ್ಕಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆರ್ ಬಸನಗೌಡ ತುರುವಿಹಾಳ ಭರ್ಜರಿ ಗೆಲುವಿಗೆ ಕಾರಣ ಎಂದು ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು
ನಗರದ ಕಾಂಗ್ರೆಸ್ ಕಛೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡುತ್ತ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಬಿಜೆಪಿ ಸರ್ಕಾರ ಗಳ ಜನವಿರೋಧಿ ಆಡಳಿತ ನೀತಿಯಿಂದ ಬೇಸತ್ತು ಹೋಗಿದ್ದಾರೆ.ಬಿಜೆಪಿ ಸರ್ಕಾರಗಳ ಸುಳ್ಳು ಭರವಸೆ ಹಾಗೂ ಕೊರೋನ ಸೋಂಕನ್ನು ತಡೆಗಟ್ಟುವಲ್ಲಿ ಸಂಪೂರ್ಣ ನಿರ್ಲಕ್ಷ್ಯ ವಹಿಸಿದ ಪರಿಣಾಮ ಮತ್ತು ಪೆಟ್ರೋಲ್.ಡೀಸೆಲ್. ಗ್ಯಾಸ್ ಬೆಲೆಗಳು ಸೇರಿದಂತೆ ಜನ ಸಾಮಾನ್ಯರ ಬಳಕೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಅರಿತ ಮತದಾರರು ಬಿಜೆಪಿ ಪಕ್ಷವನ್ನು ತಿರಸ್ಕಿರಿಸಲು ಕಾರಣ.ದೇಶದಲ್ಲಿ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರಗಳಿಗೆ ಜನರು ಶಾಪ ಹಾಕುತ್ತಿದ್ದಾರೆ.
ಮಸ್ಕಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಇಡೀ ಸರ್ಕಾರವೇ ಕ್ಷೇತ್ರದ ಮತದಾರರಿಗೆ ಹಣ ಹಂಚಿಕೆ ಮಾಡಿತ್ತು.ಆದರೆ ಕ್ಷೇತ್ರದಲ್ಲಿ ಮತದಾರರು ಬಿಜೆಪಿ ಪಕ್ಷದ ಯಾವ ಆಸೆ ಮತ್ತು ಆಮಿಷಕ್ಕೆ ಮನ್ನಣೆ ನೀಡದೆ.ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಜನಪರ.ರೈತಪರ.ಯುವಕರ ಪರವಾದ ಹಾಗೂ ಜನ ಸಾಮಾನ್ಯರ ಪರವಾದ ಯೋಜನೆಗಳು ಇವತ್ತಿಗೂ ಜನರ ಮನಸ್ಸಲ್ಲಿ ಶಾಶ್ವತವಾಗಿ ಉಳಿದಿವೆ.ಕೆಪಿಸಿಸಿ ಅಧ್ಯಕ್ಷ ಡಿ. ಕೆ.ಶಿವಕುಮಾರ ಅಧ್ಯಕ್ಷರಾದ ಮೇಲೆ ಅನೇಕ ರೀತಿಯ ಪಕ್ಷ ಸಂಘಟನೆ ಮಾಡುವಲ್ಲಿ ಹೆಚ್ಚಿನ ಶ್ರಮ ವಹಿಸಿದ್ದಾರೆ ಇವತ್ತು ರಾಜ್ಯದಲ್ಲಿ ಕಾಂಗ್ರೆಸ್ ಬಲವರ್ಧನೆಗೆ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ. ಮಲ್ಲಿಕಾರ್ಜುನ ಖರ್ಗೆ. ಡಿ.ಕೆ.ಶಿವಕುಮಾರ. ಹೆಚ್.ಕೆ. ಪಾಟೀಲ್.ವಿಶೇಷವಾಗಿ ಧ್ರುವ ನಾರಾಯಣ ಸೇರಿದಂತೆ ಕಾಂಗ್ರೆಸ್ ಪಕ್ಷದ ಅನೇಕ ಹಿರಿಯ ಮುಖಂಡರು ಮಸ್ಕಿ ಕ್ಷೇತ್ರದಲ್ಲಿ ಪ್ರಚಾರ ಮಾಡಿ.ಕ್ಷೇತ್ರದ ಮತದಾರರನ್ನು ಮತ್ತು ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾಂಗ್ರೆಸ್ ಅಭ್ಯರ್ಥಿ ಆರ್.ಬಸನಗೌಡ ತುರುವಿಹಾಳ ಗೆಲುವಿಗೆ ಮುನ್ನುಡಿ ಬರೆದಿದ್ದಾರೆ.
ಮಸ್ಕಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆರ್ ಬಸನಗೌಡರ ಗೆಲುವಿಗೆ ಕಾರಣರಾದ ಕ್ಷೇತ್ರದ ಮತದಾರರಿಗೆ ಮತ್ತು ಕಾಂಗ್ರೆಸ್ ಪಕ್ಷದ ಎಲ್ಲ ಹಿರಿಯ ಜಿಲ್ಲಾ ಮಟ್ಟದ ಮುಖಂಡರುಗಳಿಗೆ. ಕಾರ್ಯಕರ್ತರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಖಾಜಾ ಮಲ್ಲಿಕ್.ಗ್ರಾಮೀಣ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ವೈ.ಅನಿಲಕುಮಾರ. ನಿರುಪಾದಿ ಗುಡಿಹಾಳ ವಕೀಲ ಸೇರಿದಂತೆ ಇತರರು ಇದ್ದರು.

Please follow and like us:

Leave a Reply

Your email address will not be published. Required fields are marked *

WhatsApp
error: Content is protected !!