ಕೆಎಸ್‌ಟಿಡಿಸಿಯಿಂದ ವಿಶೇಷ ಬಸ್ ವ್ಯವಸ್ಥೆ

ಬೆಂಗಳೂರು : ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ(ಕೆಎಸ್‌ಟಿಡಿಸಿ)ವು ಯುಗಾದಿ ಹಬ್ಬದ ಪ್ರಯುಕ್ತ ರಾಜ್ಯದ ವಿವಿಧ ಪ್ರವಾಸಿ ಸ್ಥಳಗಳಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸಿದೆ. ಸಾರಿಗೆ ವ್ಯವಸ್ಥೆ ಒದಗಿಸುವ ಸಂಬಂಧ ಬೆಂಗಳೂರಿನ ಯಶವಂತಪುರ ಬಸ್ ನಿಲ್ದಾಣದಿಂದ ಇಂದು ಸಂಜೆಯಿಂದ ರಾಜ್ಯದ ವಿವಿಧ ಸ್ಥಳಗಳಾದ ಬೆಂಗಳೂರು, ಮೈಸೂರು, ತುಮಕೂರು, ಹಾಸನ, ಶಿವಮೊಗ್ಗ, ಮಡಿಕೇರಿ, ಬಾದಾಮಿ, ಹಂಪಿ (ಹೊಸಪೇಟೆ) ಸ್ಥಳಗಳಿಗೆ ಬಸ್ ಸೇವೆ ಒದಗಿಸಲು ನಿರ್ಧರಿಸಲಾಗಿದೆ.
ನಿಗಮದಲ್ಲಿರುವ ಸುಸ್ಸಜ್ಜಿತ ಹವಾನಿಯಂತ್ರಿತ ವಾಹನಗಳ ಮೂಲಕ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಈ ಸೇವೆಯ ಸದುಪಯೋಗ ಪಡೆಯಲಿಚ್ಛಿಸುವ ಸಾರ್ವಜನಿಕರು ನಿಗಮದ ಯಶವಂತಪುರ ಕೇಂದ್ರ ಕಛೇರಿಯ ಬುಕ್ಕಿಂಗ್ ಕೌಂಟರ್, ಕೆಂಪೇಗೌಡ ಬುಕ್ಕಿಂಗ್ ಕೌಂಟರ್ ಹಾಗೂ ರೆಡ್‌ಬಸ್ ಪೋರ್ಟಲ್ ಹಾಗೂ ನಿಗಮದ ಅಧಿಕೃತ ಟ್ರಾವೆಲ್ ಏಜೆಂಟ್‌ಗಳ ಮುಖಾಂತರ ಮುಂಗಡ ಬುಕ್ಕಿಂಗ್ ಮಾಡಬಹುದಾಗಿರುತ್ತದೆ ಎಂದು ನಿಗಮದ ಅಧ್ಯಕ್ಷೆ ಶೃತಿ ಕೃಷ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ತಿತಿತಿ.ಞsಣಜಛಿ.ಛಿo ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ ೦೮೦-೪೩೩೪ ೪೩೩೪/೩೫, +೯೧ ೮೯೭೦೬೫೦೦೭೦/ +೯೧ ೮೯೭೦೬೫೦೦೭೫ ಜಲತಾಣ/ದೂರವಾಣಿಗಳನ್ನು ಸಂಪರ್ಕಿಸಬಹುದಾಗಿದೆ.

Please follow and like us:

Leave a Reply

Your email address will not be published. Required fields are marked *

WhatsApp
error: Content is protected !!