ಕೊಪ್ಪಳ ಜಿಲ್ಲಾಡಳಿತ ಭವನದ ಪ್ರವೇಶ ದ್ವಾರದಲ್ಲೆ ಲಸಿಕೆ ಪಡೆಯುವ ವ್ಯವಸ್ಥೆ ಮಾಡಿದ ಜಿಲ್ಲಾಡಳಿತ

ಕೊಪ್ಪಳ : ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಜಿಲ್ಲಾಡಳಿತ ಭವನದಲ್ಲಿ ಕೋವಿಡ್-19 ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲಾಡಳಿತ ಭವನಕ್ಕೆ ಬರುವ ಅಧಿಕಾರಿಗಳು, ಸಿಬ್ಬಂದಿ ಮತ್ತು ಸಾರ್ವಜನಿಕರು ಕಡ್ಡಾಯವಾಗಿ ಕೋವಿಡ್-19 ಲಸಿಕೆ ಹಾಕಿಸಿಕೊಂಡ ಕುರಿತು ಪ್ರಮಾಣ ಪತ್ರವನ್ನು ತೋರಿಸಿ ಒಳಗಡೆ ಪ್ರವೇಶಿಸಲು ಅವಕಾಶ ಕಲ್ಪಿಸಲಾಗಿದೆ.
ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಮಟ್ಟದ ಕಚೇರಿಗೆ ದೈನಂದಿನ ಕೆಲಸ ಕಾರ್ಯಗಳ ನಿಮಿತ್ಯ ಸುಮಾರು 500 ರಿಂದ 1000 ಜನ ಆಗಮಿಸುತ್ತಿದ್ದು. ಕೋವಿಡ್-19 3ನೇ ಅಲೆ ವ್ಯಾಪಕವಾಗಿ ಹರಡುವುದನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಅಧಿಕಾರಿಗಳು, ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಜಿಲ್ಲಾಡಳಿತ ಭವನ ಪ್ರವೇಶಿಸುವಾಗ ಕಡ್ಡಾಯವಾಗಿ ಕೋವಿಡ್-19 ಲಸಿಕೆ ಹಾಕಿಸಿಕೊಂಡ ಬಗ್ಗೆ ಪ್ರಮಾಣ ಪತ್ರ ತೋರಿಸಿ ಒಳಗಡೆ ಪ್ರವೇಶಿಸಬೇಕು. ಲಸಿಕೆ ಹಾಕಿಸಿಕೊಳ್ಳದೇ ಇರುವವರು ಜಿಲ್ಲಾಡಳಿತ ಭವನದಲ್ಲಿರುವ ಆಡಿಟೋರಿಯಮ್ ಹಾಲ್ ನ ಮುಂಭಾಗದಲ್ಲಿ ಲಸಿಕೆಯನ್ನು ಹಾಕಲಾಗುತ್ತಿದ್ದು, ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ಡೈವಿಂಗ್ ಲೈಸೆನ್ಸ್, ಬ್ಯಾಂಕ್ ಖಾತೆ ಪುಸ್ತಕ (ಇದರಲ್ಲಿ ಯಾವುದಾದರು ಒಂದು ದಾಖಲೆ) ತೋರಿಸಿ ಲಸಿಕೆ ಹಾಕಿಸಿಕೊಳ್ಳಬೇಕು. ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಲಸಿಕೆಯನ್ನು ಹಾಕಲಾಗುವುದು.

Please follow and like us:

Leave a Reply

Your email address will not be published. Required fields are marked *

WhatsApp
error: Content is protected !!