ಕೊಪ್ಪಳ ಜಿಲ್ಲೆಯ ಪ್ರಥಮ ಮಹಿಳಾ ಸಿಇಒ ಆಗಿ ಫೌಜಿಯಾ ತರನುಮ್

ಕೊಪ್ಪಳ: ಕೊಪ್ಪಳ ಜಿಲ್ಲೆಯ ಜಿಲ್ಲಾ ಪಂಚಾಯತ್‌ನ ಮೊದಲ ಮಹಿಳಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ೨೦೧೫ ನೇ ಐಎಎಸ್ ಬ್ಯಾಚ್‌ನ ಅಧಿಕಾರಿ ಫೌಜಿಯಾ ತರನುಮ್ ಅವರು ಶುಕ್ರವಾರದಂದು ಅಧಿಕಾರ ಸ್ವೀಕಾರ ಮಾಡಿದ್ದಾರೆ.
ಇವರು ಮೂಲತಹ ಬೆಂಗಳೂರಿನವರಾಗಿದ್ದು ಈ ಹಿಂದೆ ಅವರು ಉತ್ತರ ಕನ್ನಡ ಜಿಲ್ಲೆಯ ಉಪ ವಿಭಾಗೀಯ ಅಧಿಕಾರಿಯಾಗಿ, ಕಲಬುರಗಿ ಜಿಲ್ಲೆಯ ಮಹಾನಗರ ಪಾಲಿಕೆಯ ಆಯುಕ್ತರಾಗಿ, ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಹಾಗೂ ರಾಜ್ಯ ತೋಟಗಾರಿಕೆ ಇಲಾಖೆಯ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಕೊಪ್ಪಳ ಜಿಲ್ಲೆಯ ಜಿಲ್ಲಾ ಪಂಚಾಯತಿಯ ಮೊದಲ ಮಹಿಳಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ಈ ಬಗ್ಗೆ ಪತ್ರಕರ್ತರಿಗೆ ಮಾಹಿತಿ ನೀಡಿ ಮಾತನಾಡಿದ ಅವರು, ಕೊಪ್ಪಳ ಜಿಲ್ಲೆಗೆ ಮೊದಲ ಬಾರಿಗೆ ಸಿಇಓ ಆಗಿ ಬಂದಿದ್ದು, ಎಲ್ಲಾ ತಾಲ್ಲೂಕು ಮತ್ತು ಗ್ರಾಮ ಪಂಚಾಯತಿಗಳು ಸೇರಿದಂತೆ ವಿವಿಧ ಇಲಾಖಾವಾರು ಮಾಹಿತಿ ಪಡೆದು ವಿಶೇಷವಾಗಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಕಾಳಜಿ ನೀಡುವುದರ ಜೊತೆಗೆ ಜಿಲ್ಲೆಯ ಅಭಿವೃದ್ಧಿಗಾಗಿ ಪ್ರಾಮಾಣಿಕವಾಗಿ ಮತ್ತು ನಿಷ್ಠೆಯಿಂದ ಕೆಲಸ ಮಾಡುತ್ತೇನೆ. ಇದಕ್ಕೆ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳ ಸಹಕಾರವು ಅಗತ್ಯ. ಇಂದಿನ ಈ ಕೋವಿಡ್ -೧೯ ಸಂದರ್ಭದಲ್ಲಿ ಜನರು ನಿರ್ಲಕ್ಷ್ಯ ವಹಿಸದೆ ತಮ್ಮ ಆರೋಗ್ಯದ ಬಗ್ಗೆ ಗಮನಹರಿಸಬೇಕು ಮತ್ತು ಮಾಸ್ಕ್ ಧರಿಸಿ ಹಾಗೂ ಸಾಮಾಜಿಕ ಅಂತರ ಪಾಲಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.

Please follow and like us:

Leave a Reply

Your email address will not be published. Required fields are marked *

WhatsApp
error: Content is protected !!