ಖ್ಯಾತ ಚುಟುಕು ಕವಿ ಜರಗನಹಳ್ಳಿ ಶಿವಶಂಕರ ನಿಧನಕ್ಕೆ ಸಂತಾಪ

ಸಿಂಧನೂರು: ನಾಡಿನ ಪ್ರಸಿದ್ಧ ಚಿಂತಕ, ಚಟುಕು ಸಾಹಿತಿ ಜರಗನಹಳ್ಳಿ ಶಿವಶಂಕರ (೭೨) ನಿಧನರಾಗಿದ್ದಾರೆ. ಕೆನರಾ ಬ್ಯಾಂಕಿನಲ್ಲಿ ಸುಮಾರು ೨೮ ವರ್ಷಗಳವರೆಗೆ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಹೊಂದಿದ ಅವರು ೨೦೦೪-೦೮ ರ ಅವಧಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ತರಂಗ, ವಿಜಯ ಕರ್ನಾಟಕ, ಉತ್ಥಾನ, ಕರ್ಮವೀರ ಪತ್ರಿಕೆಗಳಲ್ಲಿ ಅಂಕಣ ಬರಹಗಾರ ರಾಗಿದ್ದರು. ೨೦೦೯ ರಲ್ಲಿ ಮೈಸೂರು ದಸರಾ ಚುಟುಕು ಕವಿಗೋಷ್ಠಿ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾವ್ಯಕ್ಕೆ ಮೀಸಲಾದ ಶುಭದ ಪ್ರಕಾಶನದ ಪ್ರಕಾಶಕರಾಗಿ ೪೦ ಕವನ ಸಂಕಲನಗಳನ್ನು ಪ್ರಕಟಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ. ಚುಟುಕು ರತ್ನ ಪ್ರಶಸ್ತಿ, ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ದಿನಕರ ದೇಸಾಯಿ ಸಾಹಿತ್ಯ ಪ್ರಶಸ್ತಿ ಗಳನ್ನು ಪಡೆದಿದ್ದ ಹಿರಿಯ ಕವಿ ಜರಗನಹಳ್ಳಿ ಶಿವಶಂಕರ ನಿಧನದಿಂದ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದಷ್ಟು ನಷ್ಟವಾಗಿದೆ ಎಂದು ಚುಟುಕು ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಬೀರಪ್ಪ ಶಂಭೋಜಿ ಸಂತಾಪ ವ್ಯಕ್ತಪಡಿಸಿದ್ದಾರೆ. ಚುಟುಕು ಸಾಹಿತ್ಯ ಪರಿಷತ್ತಿನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಮ್.ಭಾಸ್ಕರ್, ಪ್ರಧಾನ ಸಂಚಾಲಕ ವೀರೇಶ ಗೋನವಾರ, ತಾಲೂಕ ಅಧ್ಯಕ್ಷ ಶ್ರೀಶೈಲ್ ಕೌದಿ, ಚುಟುಕು ಕವಿ ವಿ.ಸಿ. ಪಾಟೀಲ್ ಜರಗನಹಳ್ಳಿ ಶಿವಶಂಕರ ಅವರ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ

Please follow and like us:

Leave a Reply

Your email address will not be published. Required fields are marked *

WhatsApp
error: Content is protected !!