ಜಲಶಕ್ತಿ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ

ಅಖಿಲ ವಾಣಿ ಸುದ್ದಿ
ಯಲಬುರ್ಗಾ: ಪ್ರತಿಯೊಬ್ಬರೂ ಗ್ರಾಮೀಣ ಭಾಗದಲ್ಲಿ ನೀರನ್ನು ಮಿತವಾಗಿ ಬಳಸುವ ಮೂಲಕ ಜಲ ಸಂರಕ್ಷಣೆ ಮಾಡುವ ಕಾರ್ಯವಾಗಬೇಕು ಎಂದು ತಾಲೂಕು ಪಂಚಾಯಿತಿ ನರೇಗಾ ಸಹಾಯಕ ಬಸವರಾಜ ಬಡಿಗೇರ್ ಹೇಳಿದರು.
ತಾಲೂಕಿನ ಬುಕನಟ್ಟಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಜಲ ಶಕ್ತಿ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಕ್ರವಾರ ಮಾತನಾಡಿದರು.
ಜಿಲ್ಲೆಯಲ್ಲಿ ಅತ್ಯಂತ ಹಿಂದುಳಿದ ತಾಲೂಕಿನಲ್ಲಿ ಮಳೆಯಾಶ್ರಿತ ಪ್ರದೇಶವೂ ಇರುವುದರಿಂದ ಮಳೆ ನೀರನ್ನು ಸಂರಕ್ಷಣೆ ಮಾಡಬೇಕಿದೆ.ಕ್ಷೇತ್ರದಲ್ಲಿ ಜೀವ ಜಲ ರಕ್ಷಣೆ ಮಾಡಲು ತಾಲೂಕು ಆಯ್ಕೆಯಾಗಿದ್ದು, ಬಹಳ ಸಂತೋಷಕರವಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಪ್ರತಿಯೊಂದು ಹಳ್ಳಿಯಲ್ಲಿ ನೀರು ಮಿತವಾಗಿ ಉಪಯೋಗಿಸಬೇಕು.ಈಗಾಗಲೇ ಗ್ರಾಮೀಣ ಭಾಗದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಯೋಜನೆಯಡಿ ನಾನಾ ಕಾಮಗಾರಿಗಳು ಆರಂಭಿಸಿದ್ದು,ನೀರು ಸಂಗ್ರಹಕ್ಕೆ ಕೃಷಿ ಹೊಂಡ ಚೆಕ್ ಡ್ಯಾಂ ನಿರ್ಮಾಣ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಮಾಟಲದಿನ್ನಿ ಗ್ರಾಮ ಪಂಚಾಯಿತಿ ಪಿಡಿಒ ಹನುಮಂತಗೌಡ ಪಾಟೀಲ್, ಐ.ಇ.ಸಿ ಸಂಯೋಜಕ ಲಕ್ಷ್ಮಣ್ ಕೆರಳ್ಳಿ ಸೇರಿದಂತೆ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು,ಸದಸ್ಯರು,ಸಹಾಯಕ ನಿರ್ದೇಶಕರು ಸಿಬ್ಬಂದಿಗಳು ಇನ್ನಿತರರು ಇದ್ದರು.

Please follow and like us:

Leave a Reply

Your email address will not be published. Required fields are marked *

WhatsApp
error: Content is protected !!