ಜಿಲ್ಲಾ ಕಸಾಪ ಅಧ್ಯಕ್ಷ ಸ್ಥಾನದ ಅಭ್ಯಥಿ:ದೇವದುರ್ಗದ ರಂಗಣ್ಣ ಪಾಟೀಲ್ ಅಳ್ಳುಂಡಿಗೆ ಮತ ನೀಡಿ

ಅಖಿಲ ವಾಣಿ ಸುದ್ದಿ
ಸಿಂಧನೂರು: ರಂದು ನಡೆಯಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ದೇವದುರ್ಗದ ಹಿರಿಯ ಪತ್ರಕರ್ತ, ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ತಾಲೂಕ ಗೌರವ ಕಾರ್ಯದರ್ಶಿಯಾಗಿ, ತಾಲೂಕ ಅಧ್ಯಕ್ಷರಾಗಿ, ಜಿಲ್ಲಾ ಗೌರವ ಕಾರ್ಯದರ್ಶಿಯಾಗಿ ಉತ್ತಮ ಸೇವೆ ಸಲ್ಲಿಸಿ ಯಶಸ್ವಿ ಸಮ್ಮೇಳನಗಳನ್ನು ನಡೆಸಿದ ಅನುಭವಿ ಸರಳ ವ್ಯಕ್ತಿತ್ವದ ರಂಗಣ್ಣ ಪಾಟೀಲ್ ಅಳ್ಳುಂಡಿಯವರಿಗೆ ಮತ ಚಲಾಯಿಸಿ ಹೆಚ್ಚಿನ ಬಹುಮತದೊಂದಿಗೆ ಆಯ್ಕೆ ಮಾಡಿ ಜಿಲ್ಲೆಯ ತುಂಬ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಚಟುವಟಿಕೆಗಳು ವ್ಯವಸ್ಥಿತವಾಗಿ ನಡೆಯಲು ಅನುಕೂಲ ಮಾಡಿಕೊಡಬೇಕೆಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಎಸ್. ಶರಣೇಗೌಡ ಮತದಾರರಲ್ಲಿ ಮನವಿ ಮಾಡಿಕೊಂಡರು
ಅವರು ನಗರದ ಪಟೇಲವಾಡಿ, ಉಪ್ಪಾರವಾಡಿ ಹಾಗೂ ಬ್ರಾಹ್ಮಣರ ಓಣಿಗಳಲ್ಲಿ ಪಾದಯಾತ್ರೆ ಮಾಡುವುದರ ಮೂಲಕ ಕನ್ನಡ ಸಾಹಿತ್ಯ ಪರಿಷತ್ತಿನ ಅಜೀವ ಸದಸ್ಯರುಗಳ ಮನೆ ಮನೆಗೆ ತೆರಳಿ ರಂಗಣ್ಣ ಪಾಟೀಲ್ ಅಳ್ಳುಂಡಿಯವರಿಗೆ ಮತ ನೀಡಬೇಕಾಗಿ ವಿನಂತಿಸಿಕೊಂಡರು
ಈ ಸಂದರ್ಭದಲ್ಲಿ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬೀರಪ್ಪ ಶಂಭೋಜಿ, ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಗೌರವಾಧ್ಯಕ್ಷ ಎಸ್.ದೇವೇಂದ್ರಗೌಡ, ಕನ್ನಡ ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ ಸರಸ್ವತಿ ಬಂಡಾರದ ಸದಸ್ಯ ಪಂಪಯ್ಯ ಸ್ವಾಮಿ ಸಾಲಿಮಠ, ಬಸವ ಕೇಂದ್ರದ ಮಾಜಿ ಅಧ್ಯಕ್ಷ ಶರಣಪ್ಪ ಟೆಂಗಿನಕಾಯಿ, ಚಂದ್ರಶೇಖರ ಮೇಟಿಗೌಡ, ಗಾಯಕ ಗುಂಡೂರಾವ್ ಚೆನ್ನಳ್ಳಿ, ಚಲುವಾದಿ ನೌಕರ ಸಂಘದ ತಾಲೂಕ ಅಧ್ಯಕ್ಷ ಹೆಚ್.ಎಫ್. ಮಸ್ಕಿ, ಸಂಗಮೇಶ ಮೆಂಟಗೇರಿ ಉಪಸ್ಥಿತರಿದ್ದು ರಂಗಣ್ಣ ಪಾಟೀಲರ ಗೆಲುವಿಗೆ ಸಹಕರಿಸಬೇಕೆಂದು ವಿನಂತಿಸಿಕೊಂಡರುಜಿಲ್ಲಾ ಕಸಾಪ ಅಧ್ಯಕ್ಷ ಸ್ಥಾನದ ಅಭ್ಯಥಿ:

Please follow and like us:

Leave a Reply

Your email address will not be published. Required fields are marked *

WhatsApp
error: Content is protected !!