ಜಿಲ್ಲೆಯಲ್ಲಿ ಯಾವುದೇ ಆಕ್ಸಿಜನ್ ಕೊರತೆಯಾಗದಂತೆ ಕ್ರಮ : ಸಚಿವ ಹಾಲಪ್ಪ ಆಚಾರ್


ಕೊಪ್ಪಳ, ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆಯಾಗದಂತೆ ಈಗಾಗಲೇ ಜಿಲ್ಲಾಸ್ಪತ್ರೆಯಲ್ಲಿ ಒಂದು ಆಕ್ಸಿಜನ್ ಉತ್ಪಾದನಾ ಘಟಕವನ್ನು ಸ್ಥಾಪಿಸಿದ್ದು, ಹೆಚ್ಚುವರಿಯಾಗಿ ಗಂಗಾವತಿ, ಯಲಬುರ್ಗಾ, ಕುಷ್ಟಗಿಯಲ್ಲಿ ಆಕ್ಸಿಜನ್ ಘಟಕ ಸ್ಥಾಪಿಸಲು ಇನ್ನೂ ಹದಿನೈದು ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಸರ್ಕಾರದ ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಹಾಲಪ್ಪ ಬಸಪ್ಪ ಆಚಾರ್ ಹೇಳಿದರು.
ಅವರು ಶನಿವಾರದಂದು ಜಿಲ್ಲಾಡಳಿತ ಭವನಕ್ಕೆ ಆಗಮಿಸಿದ ಸಂದರ್ಭದಲ್ಲಿ ಪತ್ರಕರ್ತರನ್ನುದ್ದೇಶಿಸಿ ಮಾತನಾಡಿದರು.
ಮೊದಲ ಬಾರಿಗೆ ಸಚಿವನಾಗಿ ಜಿಲ್ಲೆಗೆ ಬಂದ ತಕ್ಷಣವೇ ಅಧಿಕಾರಿಗಳ ಸಭೆ ಕರೆದು ಜಿಲ್ಲೆಯ ಕೋವಿಡ್-19 ಸ್ಥಿತಿ-ಗತಿಗಳ ಕುರಿತು ಮಾಹಿತಿ ಪಡೆದುಕೊಂಡಿದ್ದೇನೆ. ಈ ಹಿಂದೆ ಕೋವಿಡ್‌ನ ಒಂದು ಮತ್ತು ಎರಡನೇ ಅಲೆಯಲ್ಲಿ ನಾವು ಸಾಕಷ್ಟು ಅನುಭವವನ್ನು ಕಂಡಿದ್ದೇವೆ. ಮತ್ತು ಮೂರನೇ ಅಲೆಗೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದರು.
ಈ ಸಲ ತಜ್ಞರು ಹೇಳುವ ಪ್ರಕಾರ ಮಕ್ಕಳಿಗೆ ಕೋವಿಡ್ ಸೋಂಕು ಹೆಚ್ಚು ಹರಡುತ್ತದೆ ಎಂಬ ಕಾರಣಕ್ಕಾಗಿ ವೆಂಟಿಲೇಟರ್ ಹಾಗೂ ಮಕ್ಕಳಿಗಾಗಿಯೇ ಪ್ರತ್ಯೇಕ ವಾರ್ಡ್ ಹಾಗೂ ಇತರೆ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಈಗಾಗಲೇ ಪೂರ್ವಭಾವಿ ಸಭೆ ಕರೆದು ಜಿಲ್ಲೆಯಲ್ಲಿ ಮೂರನೇ ಅಲೆಗೆ ಯಾವುದೇ ತೊಂದರೆಯಾಗದAತೆ ಕ್ರಮ ವಹಿಸಲು ಸೂಚಿಸಿದ್ದೇನೆ ಎಂದು ಹೇಳಿದರು.
ಹೋದ ಸಲ ಕೋವಿಡ್ ಸಂದರ್ಭದಲ್ಲಿ ಆಕ್ಸಿಜನ್‌ಗಾಗಿ ಪರದಾಡಿದ್ದೇವೆ.  ಆದರೆ ಆಕ್ಸಿಜನ್ ಕೊರತೆಯಿಂದ ಯಾವುದೇ ಜೀವ ಹಾನಿಯಾಗಿಲ್ಲ.  ಈ ಸಲ ಆ ರೀತಿಯ ಯಾವುದೇ ಆಕ್ಸಿಜನ್ ಸಮಸ್ಯೆಯಾಗದಂತೆ ಅಗತ್ಯವಿರುವ ಕಡೆ ಆಕ್ಸಿಜನ್ ಪ್ಲಾಂಟ್‌ಗಳನ್ನು ನಿರ್ಮಿಸಲಾಗುವುದು.  ನಮ್ಮ ಸರ್ಕಾರವು ಕೋವಿಡ್ ನಿರ್ವಹಣೆಗಾಗಿ ಸಾಕಷ್ಟು ವೈದ್ಯರನ್ನು ಅಗತ್ಯವಿರುವ ಆಸ್ಪತ್ರೆಗಳಲ್ಲಿ ನೇಮಿಸಿಕೊಳ್ಳಲಾಗುತ್ತಿದ್ದು, ಈ ಕೋವಿಡ್-19 ಮಹಾಮಾರಿಯ ನಿರ್ಮೂಲನೆಗಾಗಿ ನಮ್ಮ ಸರ್ಕಾರವು ದಿಟ್ಟ ಕ್ರಮ ಕೈಗೊಳ್ಳುತ್ತಿದೆ ಎಂದು ಸಚಿವರು ಹೇಳಿದರು.
ಈ ಸಂದರ್ಭದಲ್ಲಿ ಸಂಸದ ಕರಡಿ ಸಂಗಣ್ಣ, ಜಿಲ್ಲಾಧಿಕಾರಿ ಸುರಳ್ಕರ್ ವಿಕಾಸ್ ಕಿಶೋರ್, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಬಿ.ಫೌಜಿಯಾ ತರನ್ನುಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಶ್ರೀಧರ್, ಅಪರ ಜಿಲ್ಲಾಧಿಕಾರಿ ಎಂ.ಪಿ. ಮಾರುತಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಹಲವು ಗಣ್ಯರು ಉಪಸ್ಥಿತರಿದ್ದರು.

Please follow and like us:

Leave a Reply

Your email address will not be published. Required fields are marked *

WhatsApp
error: Content is protected !!