ಜಿ.ಪಂ. ಸಿಇಒ ಅವರಿಗೆ ಆರೋಗ್ಯ ಇಲಾಖೆ ವತಿಯಿಂದ ಸನ್ಮಾನ

ಕೊಪ್ಪಳ, : ಕೊಪ್ಪಳ ಜಿಲ್ಲೆಯ ಮಹಾತ್ಮಾ ಗಾಂಧಿ ನರೇಗಾ ಯೋಜನೆಯ ೨೦೨೦-೨೧ನೇ ಸಾಲಿನಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಎಮ್.ಐ.ಎಸ್ ಅಂಕಿ ಅಂಶಗಳನ್ನು ಆಧರಿಸಿ ಅತ್ಯುತ್ತಮವಾಗಿ ಸಾಧನೆ ಮಾಡಿದ್ದಕ್ಕಾಗಿ ಜಿಲ್ಲಾ ಪಂಚಾಯತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಘುನಂದನ್ ಮೂರ್ತಿ ಅವರಿಗೆ ರಾಜ್ಯಮಟ್ಟದ ಪ್ರಶಸ್ತಿ ಲಭಿಸಿರುವ ಪ್ರಯುಕ್ತ ಗುರುವಾರದಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಲಿಂಗರಾಜು ಟಿ., ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಮಹೇಶ ಎಂ.ಜಿ., ಡಾ. ಜಂಬಯ್ಯ ಸೇರಿದಂತೆ ಇತರರು ಉಪಸ್ಥಿತರಿದ್ದರು.

Please follow and like us:

Leave a Reply

Your email address will not be published. Required fields are marked *

WhatsApp