ಡಿಜಿಟಲ್ ಗ್ರಂಥಾಲಯ ಸದ್ಬಳಕೆ ಮಾಡಿಕೊಳ್ಳಿ : ಡಾ.ಡಿ.ಮೋಹನ್

ಅಖಿಲ ವಾಣಿ ಸುದ್ದಿ
ಗಂಗಾವತಿ: ತಾಲ್ಲೂಕಿನ ಶ್ರೀರಾಮನಗರದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಡಿಜಿಟಲ್ ಗ್ರಂಥಾಲಯವನ್ನು ಬುಧವಾರ ಉದ್ಘಾಟನೆ ಮಾಡಲಾಯಿತು.
ಈ ವೇಳೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ.ಡಿ.ಮೋಹನ್ ಮಾತನಾಡಿ, ವಿಶ್ವ ಜ್ಞಾನ ದಿನವಾದ ಇಂದು ಗ್ರಾಮದ ಮಕ್ಕಳಿಗೆ ಓದಲು ಅನುಕೂಲವಾಗಲಿ ಎನ್ನುವ ಉದ್ದೇಶದಿಂದ ಡಿಜಿಟಲ್ ಗ್ರಂಥಾಲಯ ಉದ್ಘಾಟನೆ ಮಾಡಲಾಗಿದೆ. ಗ್ರಾ.ಪಂ ಅನುದಾನದಲ್ಲಿ ಈ ಗ್ರಂಥಾಲಯವನ್ನು ನವೀಕರಣಗೊಳಿಸಲಾಗಿದ್ದು, ಸಂಪೂರ್ಣವಾಗಿ ಡಿಜಿಟಲ್ ಮಾಡಲಾಗಿದೆ. ಗ್ರಂಥಾಲಯದಲ್ಲಿ ಮಕ್ಕಳಿಗೆ ಓದುವ ಪುಸ್ತಕಗಳು ಸೇರಿದಂತೆ ಕಂಪ್ಯೂಟರ್ ಜ್ಞಾನವನ್ನು ಪಡೆಯಲು ಅನುಕೂಲ ಕಲ್ಪಿಸಲಾಗಿದೆ. ಗ್ರಾಮದ ಎಲ್ಲಾ ಮಕ್ಕಳು ಈ ಡಿಜಿಟಲ್ ಗ್ರಂಥಾಲಯದ ಸೌಲಭ್ಯವನ್ನು ಪಡೆದುಕೊಳ್ಳಬೇಕು ಎಂದರು.
ನಂತರ ಗ್ರಾ.ಪಂ ಅಧ್ಯಕ್ಷೆ ರೇಣುಕಮ್ಮ ಮಾತನಾಡಿ, ಈ ಮುಂಚೆ ಗ್ರಂಥಾಲಯ ಕಟ್ಟಡ ಹಳೆಯಾದಾಗಿತ್ತು. ಇದೀಗ ತಾ.ಪಂ ಇಓ ಡಾ.ಡಿ.ಮೋಹನ್ ಹಾಗೂ ಗ್ರಾ.ಪಂ ಅಧಿಕಾರಿಗಳ ಕಾಳಜಿಯಿಂದ ನಮ್ಮ ಗ್ರಾಮದ ಗ್ರಂಥಾಲಯವು ಡಿಜಿಟಲ್ ರೂಪ ಪಡೆದಿದೆ. ಇದರಿಂದ ಮಕ್ಕಳಿಗೆ ಓದಲು ಗ್ರಂಥಾಲಯದಲ್ಲಿ ಒಳ್ಳೆಯ ಪುಸ್ತಕಗಳ ಸೌಲಭ್ಯವನ್ನು ಕಲ್ಪಿಸಲಾಗಿದೆ. ಜೊತೆಗೆ ಎರಡು ಕಂಪ್ಯೂಟರ್ ಗಳನ್ನು ಅಳವಡಿಸಿದ್ದು, ಇದರಿಂದ ಕಂಪ್ಯೂಟರ್ ಜ್ಞಾನವನ್ನು ಪಡೆಯಲು ಅನುಕೂಲ ಮಾಡಲಾಗಿರುವುದು ಶ್ಲಾಘನೀಯ ಎಂದರು.
ಇದೇ ವೇಳೆ ಡಿಜಿಟಲ್ ಗ್ರಂಥಾಲಯದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯನ್ನು ಆಚರಣೆ ಮಾಡಲಾಯಿತು.
ಈ ವೇಳೆ ತಾಲೂಕು ಪಂಚಾಯತ್ ಅಧ್ಯಕ್ಷ ಮಹಮ್ಮದ್ ರಫಿ, ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರ್ ಗೌಡ, ಸಿಡಿಪಿಓ ಗಂಗಪ್ಪ, ಗ್ರಾಪಂ ಉಪಾಧ್ಯಕ್ಷ ರೆಡ್ಡಿ ವೀರರಾಜು, ಪಿಡಿಓ ವತ್ಸಲಾ, ಸೇರಿದಂತೆ ಗ್ರಾ.ಪಂ ಸದಸ್ಯರು ಇದ್ದರು.
ಕೆಪಿಎಲ್೧೪ಜಿವಿಟಿ೦೨ ಗಂಗಾವತಿ ತಾಲ್ಲೂಕಿನ ಶ್ರೀರಾಮನಗರದಲ್ಲಿ ಗ್ರಾಮ ಪಂಚಾಯಿತಿ ಅನುದಾನ ನವೀಕರಣಗೊಂಡ ಡಿಜಿಟಲ್ ಗ್ರಂಥಾಲಯವನ್ನು ಬುಧವಾರ ಗ್ರಾ.ಪಂ ಅಧ್ಯಕ್ಷೆ ರೇಣುಕಮ್ಮ ಉದ್ಘಾಟಿಸಿದರು.

Please follow and like us:

Leave a Reply

Your email address will not be published. Required fields are marked *

WhatsApp
error: Content is protected !!