ದೇವರಾಜ ಅರಸು ಜನ್ಮ ದಿನಾಚರಣೆ : ಜಿಲ್ಲಾಡಳಿತದಿಂದ ಪುಷ್ಪನಮನ ಸಲ್ಲಿಕೆ


ಕೊಪ್ಪಳ : ಡಿ.ದೇವರಾಜ ಅರಸು ಅವರ 106ನೇ ಜನ್ಮ ದಿನಾಚರಣೆಯ ಪ್ರಯುಕ್ತ ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಇಂದು (ಆ.20) ಡಿ.ದೇವರಾಜ ಅರಸುರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.
ಪ್ರಸಕ್ತ ಸಾಲಿನ ಡಿ.ದೇವರಾಜ ಅರಸು ಅವರ ಜನ್ಮ ದಿನಾಚರಣೆಯನ್ನು ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರದಂದು ಸರಳವಾಗಿ ಆಚರಿಸಲಾಯಿತು.  ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ಡಿ.ದೇವರಾಜ ಅರಸುರವರ ಭಾವಚಿತ್ರಕ್ಕೆ ಪುಷ್ಪವನ್ನು ಅರ್ಪಿಸುವುದರ ಮೂಲಕ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಪಿ ಮಾರುತಿ, ಉಪವಿಭಾಗಾಧಿಕಾರಿ ನಾರಾಯಣರೆಡ್ಡಿ ಕನಕರೆಡ್ಡಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಿ.ಎಂ ದೊಡ್ಡಮನಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಗಂಗಪ್ಪ, ಜಂಟಿ ಕೃಷಿ ನಿರ್ದೇಶಕ ಸದಾಶಿವ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ನವೀನ್ ಸಿಂತ್ರೆ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ ದೇಸಾಯಿ, ಪಶು ಇಲಾಖೆ ಉಪನಿರ್ದೇಶಕ ಹೆಚ್.ನಾಗರಾಜ ಸೇರಿದಂತೆ ವಿವಿಧ ಇಲಾಖೆಗಳ ಹಾಗೂ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.

Please follow and like us:

Leave a Reply

Your email address will not be published. Required fields are marked *

WhatsApp
error: Content is protected !!