ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಕೊಪ್ಪಳ, : ಕೆ.ಎಸ್.ಆರ್.ಟಿ.ಸಿ ನೌಕರರ ಕೂಟ ವತಿಯಿಂದ ಏಪ್ರಿಲ್ ೦೭ ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗಿದ್ದು, ನೌಕರರ ಒಕ್ಕೂಟದ ಮುಖಂಡರು ಪ್ರತಿದಿನ ಒಂದೊಂದು ರೀತಿಯ ಚಳುವಳಿಯನ್ನು ಹಮ್ಮಿಕೊಳ್ಳುತ್ತಿರುವುದರಿಂದ ಮುಷ್ಕರದ ಸಮಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ಜಿಲ್ಲೆಯ ತಹಶೀಲ್ದಾರರ ಕಚೇರಿ, ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ಜಿಲ್ಲೆಯಲ್ಲಿ ಬರುವ ಕೆ.ಎಸ್.ಆರ್.ಟಿ.ಸಿ ಡಿಪೋ ಮತ್ತು ಬಸ್ ನಿಲ್ದಾಣಗಳ ಸುತ್ತಲೂ ಹಾಗೂ ಎಲ್ಲಾ ಶಾಸಕರ ಮನೆ ಮತ್ತು ಕಚೇರಿಗಳ ೨೦೦ ಮೀಟರ್ ಅಂತರದಲ್ಲಿ ಏಪ್ರಿಲ್ ೧೫ ರ ಬೆಳಿಗ್ಗೆ ೦೫ ಗಂಟೆಯಿಂದ ಏ.೧೯ ರ ರಾತ್ರಿ ೧೦ ಗಂಟೆಯವರೆಗೆ ಅಪರಾಧಿಕ ದಂಡ ಪ್ರಕ್ರಿಯಾ ಸಂಹಿತೆ ೧೯೭೩ರ ಕಲಂ ೧೪೪ ರಡಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ಆದೇಶ ಹೊರಡಿಸಿದ್ದಾರೆ.
ಆದೇಶದನ್ವಯ ೨೦೦ ಮೀಟರ್ ಅಂತರದಲ್ಲಿ ಜನರು ಗುಂಪಾಗಿ ಸೇರುವುದನ್ನು ನಿಷೇಧಿಸಿದೆ. ಬಸ್ ನಿಲ್ದಾಣಕ್ಕೆ ಬರುವ ಪ್ರಯಾಣಿಕರಿಗೆ ತೊಂದರೆ ಮಾಡಬಾರದು. ಬಸ್ ನಿಲ್ದಾಣಕ್ಕೆ ಬಂದು ಹೋಗುವ ಖಾಸಗಿ ವಾಹನಗಳಿಗೆ ಯಾವುದೇ ಹಾನಿ ಮಾಡಬಾರದು. ಬಸ್ ನಿಲ್ದಾಣದಲ್ಲಿ ಧರಣಿ ಹಾಗೂ ಘೋಷಣೆಗಳನ್ನು ಕೂಗುವುದನ್ನು ನಿಷೇಧಿಸಿದೆ. ಬಸ್ ನಿಲ್ದಾಣಕ್ಕೆ ಖಾಸಗಿ ವಾಹನಗಳು ಸಾರ್ವಜನಿಕರು ಸಾಗಾಟ ಮಾಡಲು ಬಂದರೆ ಅಡ್ಡಿಪಡಿಸಬಾರದು. ಶವಾಕೃತಿ ಅಥವಾ ಪ್ರತಿಮೆಗಳನ್ನು ಪ್ರದರ್ಶನ ಮಾಡುವುದನ್ನು ಪ್ರತಿಬಂಧಿಸಲಾಗಿದೆ. ಈ ಆದೇಶ ಉಲ್ಲಂಘಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

WhatsApp