ಬಳ್ಳಾರಿಯಲ್ಲಿ ಕಾಂಗ್ರೆಸ್ ಮುಖಂಡರ ಜತೆ ರಾಜಕೀಯ ವಿದ್ಯಮಾನ ಮತ್ತು ಪಕ್ಷ ಸಂಘಟನೆ ಬಲವರ್ಧನೆ ಕುರಿತು ಚರ್ಚೆ

ಕೊಪ್ಪಳ : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್ ಅವರು ಬಳ್ಳಾರಿ ನಗರ ಮತ್ತು ಗ್ರಾಮಾಂತರ ಕಾಂಗ್ರೆಸ್ ಮುಖಂಡರ ಜತೆ ರಾಜಕೀಯ ವಿದ್ಯಮಾನ, ಪಕ್ಷ ಸಂಘಟನೆ ಬಲವರ್ಧನೆ, ಮುಂಬರುವ ಚುನಾವಣೆಗಳ ಸಂಬಂಧ ಭಾನುವಾರ ಸಮಾಲೋಚನೆ ನಡೆಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸಲೀಂ ಅಹಮದ್, ವಿಧಾನಸಭೆಯಲ್ಲಿ ಪಕ್ಷದ ಮುಖ್ಯಸಚೇತಕ ಡಾ. ಅಜಯ್ ಸಿಂಗ್, ರಾಜ್ಯಸಭೆ ಸದಸ್ಯ ನಾಸೀರ್ ಹುಸೇನ್, ಮಾಜಿ ಸಂಸದ ಕೆ.ಸಿ. ಕೊಂಡಯ್ಯ, ಮಾಜಿ ಸಚಿವರಾದ ಅಲ್ಲಂ ವೀರಭದ್ರಪ್ಪ, ಪಿ.ಟಿ.‌ ಪರಮೇಶ್ವರ ನಾಯಕ್, ಸಂತೋಷ್ ಲಾಡ್, ಶಾಸಕರಾದ ನಾಗೇಂದ್ರ, ಭೀಮಾ ನಾಯ್ಕ್, ಕಂಪ್ಲಿ ಗಣೇಶ್ ಮತ್ತಿತರರು ಭಾಗವಹಿಸಿದ್ದರು.

Please follow and like us:

Leave a Reply

Your email address will not be published. Required fields are marked *

WhatsApp
error: Content is protected !!