ಬಾಲಿವುಡ್‌ನ ಹಿರಿಯ ನಟಿ ಸುರೇಖಾ ಸಿಕ್ರಿ ಹೃದಯಾಘಾತದಿಂದ ನಿಧನ

ಮುಂಬೈ: ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಸುರೇಖಾ ಸಿಕ್ರಿ ಅವರಿಗೆ ೭೫ ವರ್ಷ ವಯಸ್ಸು ಆಗಿತ್ತು ಅವರು ಶುಕ್ರವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಕಳೆದ ಕೆಲ ತಿಂಗಳುಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಸುರೇಖಾ ಮೆದುಳಿನ ಕಾಯಿಲೆಯಿಂದ ಬಳಲುತ್ತಿದ್ದರು.
ಸುರೇಖಾ ಸಿಕ್ರಿ ಇಂದು(ಶುಕ್ರವಾರ) ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದರೆ. ಅವರು ಮೆದುಳಿನ ಕಾಯಿಲೆಯಿಂದ ಬಳಲುತ್ತಿದ್ದರು’ ಎಂದು ಮ್ಯಾನೇಜರ್ ಓಂ ಸಾಯಿ ರಾಮ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
೧೯೭೮ ರಲ್ಲಿ ಬಿಡುಗಡೆಯಾದ ಕಿಸ್ಸಾ ಕುರ್ಸಿ ಕಾ ಚಿತ್ರದ ಮೂಲಕ ಸುರೇಖಾ ಹಿಂದಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದರು. ತಮಸ್ (೧೯೮೮), ಮಮ್ಮೊ (೧೯೯೫) ಮತ್ತು ಬಧಾಯಿ ಹೋ (೨೦೧೮) ಚಿತ್ರಗಳಲ್ಲಿನ ಪಾತ್ರಗಳಿಗಾಗಿ ಅವರು ಮೂರು ಬಾರಿ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.

Please follow and like us:

Leave a Reply

Your email address will not be published. Required fields are marked *

WhatsApp