ಬೊಮ್ಮಾಯಿ ಸರಕಾರದಲ್ಲಿ ಶಶೀಲ್ ನಮೋಶಿಗೆ ಸಚಿವ ಸ್ಥಾನ ನೀಡಿ : ಶಿಕ್ಷಕರ ಒತ್ತಾಯ

ಕೊಪ್ಪಳ : ರಾಜ್ಯದ ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರ ಸರಕಾರದ ಸಚಿವ ಸಂಪುಟದಲ್ಲಿ ವಿಧಾನಪರಿಷತ್ ಸದಸ್ಯ ಶಶೀಲ್ ಜಿ.ನಮೋಶಿಗೆ ಸಚಿವ ಸ್ಥಾನ ನೀಡುವಂತೆ ಕೊಪ್ಪಳ ಅನುದಾನಿತ ಮತ್ತು ಅನುದಾನರಹಿತ ಶಿಕ್ಷಕರು ಒತ್ತಾಯಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು ವಿಧಾನಪರಿಷತ್ ಸದಸ್ಯ ಶಶೀಲ್ ಜಿ.ನಮೋಶಿಯವರು ಅವರು ನಾಲ್ಕು ಬಾರಿ ವಿಧಾನಪರಿಷತ್ ಸದಸ್ಯರಾಗಿ ಸದಸನದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಶಿಕ್ಷಕರ ಸಮಸ್ಯೆಗಳು ಹಾಗೂ ವಿವಿಧ ಬೇಡಿಕೆಗಳ ಬಗ್ಗೆ ಧ್ವನಿ ಎತ್ತಿ ಶಿಕ್ಷಕರ ಸಮಸ್ಯೆಗಳಿಗೆ ಸಾಕಷ್ಟು ಬಾರಿ ಪರಿಹರಿಸಿದ್ದಾರೆ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳಿಗೆ ವಿವಿಧ ಸೌಲಭ್ಯಗಳು ನೀಡುವ ಬಗ್ಗೆ ಸವಿಸ್ತಾರವಾಗಿ ಚರ್ಚಿಸುತ್ತ ಸಮಸ್ಯೆಗಳ ಬಗ್ಗೆ ಸದಸನದಲ್ಲಿ ಬೆಳಕು ಚೆಲ್ಲುತ್ತಾರೆ ಅಲ್ಲದೇ ವಿಶೇಷವಾಗಿ ಅವರು ಕಲ್ಯಾಣ-ಕರ್ನಾಟಕ ಭಾಗದಿಂದ ವಿಧಾನಪರಿಷತ್‌ಗೆ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ ಅಲ್ಲದೇ ಸಾಕಷ್ಟು ಅನುಭವ ಹೊಂದಿದ್ದು ಪ್ರಧಾನ ಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮೀತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಾಷ್ಟ್ರೀಯ ಬಿಜೆಪಿ ಸಂಘಟನಾ ಚತುರ ಸಂತೋ?ಜೀ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್‌ಜೋಷಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲ,ನೂತನ ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿಯವರ ಸಚಿವ ಸಂಪುಟದಲ್ಲಿ ಶಶೀಲ್ ನಮೋಶಿಗೆ ಸಚಿವ ಸ್ಥಾನಕ್ಕೆ ಪ್ರಾತಿನೀಧ್ಯ ನೀಡುವಂತೆ ಒತ್ತಾಯಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

WhatsApp
error: Content is protected !!