ಮತದಾರರ ವಿಶೇಷ ನೋಂದಣಿ ಅಭಿಯಾನಕ್ಕೆ ಡಿಸಿ ಚಾಲನೆ:ಭಾರತದ ನಕ್ಷೆ ಆಕಾರದಲ್ಲಿ ಬೃಹತ್ ಮಾನವ ಸರಪಳಿ ಮೂಲಕ ಜಾಗೃತಿ

ಕೊಪ್ಪಳ: ಮತದಾರರ ವಿಶೇಷ ನೋಂದಣಿ ಅಭಿಯಾನದ ನಿಮಿತ್ತ ಭಾರತದ ನಕ್ಷೆಯಲ್ಲಿ ಬೃಹತ್ ಮಾನವ ಸರಪಳಿ ಮೂಲಕ ಮತದಾರರ ನೋಂದಣಿಗಾಗಿ ಕೊಪ್ಪಳ ತಾಲ್ಲೂಕು ಕ್ರೀಡಾಂಗಣದಲ್ಲಿ ಇಂದು (ನ.೨೩) ಹಮ್ಮಿಕೊಳ್ಳಲಾದ ವಿಶೇಷ ಜಾಗೃತಿ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ಸಸಿಗೆ ನೀರು ಹಾಕುವುದರ ಮೂಲಕ ಚಾಲನೆ ನೀಡಿದರು.
ಮತದಾರರ ಪರಿಷ್ಕರಣೆ-೨೦೨೨ರ ಅಂಗವಾಗಿ ಭಾರತ ಚುನಾವಣಾ ಆಯೋಗ, ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗಳು ಹಾಗೂ ಕೊಪ್ಪಳ ಚುನಾವಣಾಧಿಕಾರಿಗಳ ಕಾರ್ಯಾಲಯ, ಜಿಲ್ಲಾ ಸ್ವೀಪ್ ಸಮಿತಿ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಹಯೋಗದಲ್ಲಿ ವಿಶೇಷ ನೋಂದಣಿ ಅಭಿಯಾನದಡಿ “ನಮ್ಮ ಮತದಾರರನ್ನು ಅಧಿಕಾರಯುಕ್ತ, ಜಾಗರೂಕ, ಸುರಕ್ಷಿತ ಮತ್ತು ಮಾಹಿತಿಯುಕ್ತರನ್ನಾಗಿ ಮಾಡುವುದು” ಎಂಬ ಘೋಷವಾಕ್ಯಗಳೊಂದಿಗೆ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಮತದಾರರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಕೊಪ್ಪಳ ನಗರದ ತಾಲ್ಲೂಕು ಕ್ರೀಡಾಂಗಣದಲ್ಲಿ ೨೦೦*೧೮೦ ಅಡಿ ಉದ್ದಗಲದಲ್ಲಿ ಭಾರತದ ಬೃಹತ್ ನಕ್ಷೆಯನ್ನು ರಚಿಸಿದ್ದು, ಕೊಪ್ಪಳದ ವಿವಿಧ ಶಾಲಾ, ಕಾಲೇಜುಗಳ ಸುಮಾರು ೫೦೦೦ ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿಸ್ತು ಬದ್ಧವಾಗಿ ಭಾರತದ ನಕ್ಷೆಯ ಆಕಾರದ ರೇಖೆಯ ಮೇಲೆ ಜೊತೆ ಜೊತೆಯಾಗಿ ನಿಂತು ಮಾನವ ಸರಪಳಿಯನ್ನು ನಿರ್ಮಿಸಿದರು. ಅಲ್ಲದೇ ಇದರೊಂದಿಗೆ “ವೋಟರ್ ಹೆಲ್ಪ್‌ಲೈನ್ ಆಪ್” ಎನ್ನುವ ವಾಕ್ಯವನ್ನು ಕೂಡ ರಚಿಸಿ, ಇದರಲ್ಲಿಯೂ ವಿದ್ಯಾರ್ಥಿಗಳು ಮಾನವ ಸರಪಳಿ ನಿರ್ಮಿಸಿ ಆಪ್ ಬಗ್ಗೆ ಜಾಗೃತಿ ಮೂಡಿಸುತ್ತಿರುವುದು ಆಕ?ಣೀಯವಾಗಿತ್ತು.
ಡ್ರೋಣ್ ಕ್ಯಾಮೆರಾ ಮೂಲಕ ಈ ಎಲ್ಲ ಪ್ರಕ್ರಿಯೆಯನ್ನು ಸೆರೆಹಿಡಿಯಲಾಗಿದೆ. ಮತದಾರರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಕೊಪ್ಪಳ ನಗರದಲ್ಲಿ ಹಮ್ಮಿಕೊಂಡ ಈ ಕಾರ್ಯಕ್ರಮ ವಿಶೇ?ವಾಗಿತ್ತು. ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಮತದಾರರ ವಿಶೇಷ ನೋಂದಣಿ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.
ಈ ಸಂದರ್ಭ ಜಿಲ್ಲಾ ಪಂಚಾಯತಿ ಯೋಜನಾ ನಿರ್ದೇಶಕ ಟಿ.ಕೃಷ್ಣಮೂರ್ತಿ, ಕೊಪ್ಪಳ ತಾಲ್ಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕೆ.ಮಲ್ಲಿಕಾರ್ಜುನ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ದೊಡ್ಡಬಸಪ್ಪ ನೀರಲಕೇರಿ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ರವಿಕುಮಾರ ಬಿ.ಜಿ., ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ ದೇಸಾಯಿ, ಕ್ಷೇತ್ರ ಶಿಕ್ಷಣಾಧಿಕಾರಿ ಉಮೇಶ ಪೂಜಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದು, ಕೊಪ್ಪಳ ನಗರದ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಪ್ರಾಚಾರ್ಯರು, ಶಿಕ್ಷಕರು ಸಹ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Please follow and like us:

Leave a Reply

Your email address will not be published. Required fields are marked *

WhatsApp
error: Content is protected !!