ಮತ್ತೆ ೭ ದಿನ ಕೊಪ್ಪಳ ಜಿಲ್ಲೆ ಸಂಪೂರ್ಣ ಲಾಕ್‌ಡೌನ್: ಡಿಸಿ


ಕೊಪ್ಪಳ: ಕೊಪ್ಪಳ ಜಿಲ್ಲೆಯಲ್ಲಿ ಕೋವಿಡ್-೧೯ ಪ್ರಕರಣಗಳು ದಿನೆ-ದಿನೆ ಹೆಚ್ಚಾಗುತ್ತಿದ್ದು, ಇದರ ನಿಯಂತ್ರಣಕ್ಕಾಗಿ ಮೇ ೨೪ ರಿಂದ ೩೦ ರವರೆಗೆ ಜಿಲ್ಲೆಯನ್ನು ಸಂಪೂರ್ಣ ಲಾಕ್‌ಡೌನ್ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಹೇಳಿದರು.
ಅವರು ಶುಕ್ರವಾರ (ಮೇ ೨೧) ತಮ್ಮ ಕಚೇರಿಯಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಲಾಕ್‌ಡೌನ್ ಜಾರಿಗೊಳಿಸುವ ಸಂಬಂಧ ಮಾಧ್ಯಮದವರೊಂದಿಗೆ ಮಾತನಾಡಿದರು.  
ಕೊಪ್ಪಳ ಜಿಲ್ಲೆಯಲ್ಲಿ ಕೊರೊನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ  ಮೊತ್ತೊಂದು ವಾರದ ವರೆಗೆ ಆರೋಗ್ಯ ಮತ್ತು ಕೃಷಿ ಚಟುವಟಿಕೆಗಳನ್ನು ಹೊರತು ಪಡಿಸಿ, ಇತರೆ ಎಲ್ಲವನ್ನು ಸಂಪೂರ್ಣವಾಗಿ ಲಾಕ್‌ಡೌನ್ ಮಾಡಲಾಗುತ್ತದೆ.  ಮೇ ೨೨ ಮತ್ತು ೨೩ ಶನಿವಾರ ಹಾಗೂ ಭಾನುವಾರದಂದು ಸಂಪೂರ್ಣ ಲಾಕ್‌ಡೌನ್ ಇರುವುದಿಲ್ಲ. ಬದಲಿಗೆ  ರಾಜ್ಯ ಸರ್ಕಾರವು ಹೊರಡಿಸಿರುವ ನಿಯಮಗಳನ್ವಯ ಬೆಳಿಗ್ಗೆ ೦೬ ರಿಂದ ೧೦ ಗಂಟೆಯವರೆಗೆ ಅಗತ್ಯ ಸೇವೆಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ.   ಶನಿವಾರ ಹಾಗೂ ಭಾನುವಾರ ಈ ಎರಡು ದಿನಗಳಂದು ಬೆಳಿಗ್ಗೆ ನೀಡಲಾದ ಸಮಯದಲ್ಲಿ ಅಗತ್ಯ ವಸ್ತುಗಳನ್ನು ಖರೀದಿಸುವ ನೆಪದಲ್ಲಿ ಎಲ್ಲರೂ ಮುಗಿಬೀಳಬೇಡಿ.  ಮೇ ೨೪ ರಿಂದ ೩೦ ರವರೆಗೆ ಜಿಲ್ಲೆಯನ್ನು ಸಂಪೂರ್ಣ ಲಾಕ್‌ಡೌನ್ ಇರುತ್ತದೆ ಎಂದರು.  
ಈಗಾಗಲೇ ವಾರ್ಡ್ವಾರು ಸಂಯೋಜಕರನ್ನು ನೇಮಿಸಲಾಗಿದ್ದು, ಅವರಿಂದ ಅಗತ್ಯ ವಸ್ತುಗಳನ್ನು ಮನೆ ಬಾಗಿಲಿಗೆ ಸರಬರಾಜು ಮಾಡಲಾಗುತ್ತದೆ.  ಇದಕ್ಕೆ ಜಿಲ್ಲೆಯ ಎಲ್ಲ ಸಾರ್ವಜನಿಕರು ಸಹಕರಿಸಬೇಕು.  ಕರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಜಾರಿಗೊಳಿಸಿರುವ ನಿಯಮಗಳನ್ನು ಎಲ್ಲರೂ ಚಾಚು ತಪ್ಪದೇ ಪಾಲಿಸುವುದರ ಮೂಲಕ ಕೋವಿಡ್-೧೯ ವಿರುದ್ಧದ ಹೋರಾಟಕ್ಕೆ ಕೈಜೋಡಿಸಿ ಎಂದರು.

Please follow and like us:

Leave a Reply

Your email address will not be published. Required fields are marked *

WhatsApp
error: Content is protected !!