ಮದುವೆಯಲ್ಲಿ 50 ಜನ ಭಾಗವಹಿಸಲು ಮಾತ್ರ ಅವಕಾಶ : ವಿಕಾಸ್ ಕಿಶೋರ್ ಸುರಳ್ಕರ್

ಕೊಪ್ಪಳ, : ಜಿಲ್ಲೆಯಲ್ಲಿ ಕೋವಿಡ್-19 ಎರಡನೇ ಅಲೆಯಿಂದಾಗಿ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಆದೇಶದಂತೆ ಜಿಲ್ಲೆಯಲ್ಲಿ ನಡೆಯುವ ಮದುವೆ ಕಾರ್ಯಕ್ರಮಗಳಿಗೆ ಅನುಮತಿಯನ್ನು ಕಡ್ಡಾಯಗೊಳಿಸಲಾಗಿದ್ದು, ಮದುವೆ ಕಾರ್ಯಕ್ರಮದಲ್ಲಿ 50 ಜನ ಮಾತ್ರ ಭಾಗವಹಿಸಲು ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ತಿಳಿಸಿದ್ದಾರೆ.
 ಜಿಲ್ಲೆಯಲ್ಲಿ ಮದುವೆಗೆ ಅನುಮತಿಯನ್ನು ನೀಡುವಂತೆ ಅರ್ಜಿಗಳು ಸ್ವೀಕೃತವಾಗಿವೆ. ಕಾರಣ ಜಿಲ್ಲೆಯ ತಹಶೀಲ್ದಾರರು ತಮ್ಮ ತಾಲ್ಲೂಕಿನಲ್ಲಿ ನಡೆಯುವ ಮದುವೆಗಳಿಗೆ ತಮ್ಮ ಹಂತದಲ್ಲಿಯೇ ಷರತ್ತಿಗೊಳಪಟ್ಟು ಅನುಮತಿಯನ್ನು ನೀಡಬೇಕು. ತಹಶೀಲ್ದಾರರು ಅರ್ಜಿದಾರರಿಂದ ನಿಗದಿತ ಘೋಷಣಾ ಪ್ರಮಾಣ ಪತ್ರ ಪಡೆದು, ಕೇವಲ 50 ಜನ ಮಾತ್ರ ಭಾಗವಹಿಸಲು ಅನುಮತಿಯನ್ನು ನೀಡತಕ್ಕದ್ದು.
 ಮದುವೆಯನ್ನು ಆಯೋಜಿಸಿದವರು ಮದುವೆಯಲ್ಲಿ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು, ಮದುವೆಯಲ್ಲಿ ಭಾಗವಹಿಸುವ ಜನರಿಗೆ ಕಡ್ಡಾಯವಾಗಿ ಸ್ಯಾನಿಟೈಸರ್ ಮತ್ತು ಮಾಸ್ಕ್ ವ್ಯವಸ್ಥೆಯನ್ನು ಕಲ್ಪಿಸಬೇಕು. ತಹಶೀಲ್ದಾರರು ಮದುವೆಗೆ ಅನುಮತಿ ನೀಡಿದ ಮಾಹಿತಿಯನ್ನು ಸಂಬAಧಿಸಿದ ನಗರ ಸ್ಥಳೀಯ ಸಂಸ್ಥೆಗಳಿಗೆ ಮತ್ತು ತಾಲ್ಲೂಕು ಪಂಚಾಯತನ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮಾಹಿತಿಯನ್ನು ನೀಡತಕ್ಕದ್ದು.
 ಗರಿಷ್ಟ 50 ಕ್ಕಿಂತ ಹೆಚ್ಚಿನ ಜನರು ಭಾಗವಹಿಸಿದಲ್ಲಿ ಸಂಬAಧಿಸಿದ ಕಲ್ಯಾಣ ಮಂಟಪದ ಅಥವಾ ಮದುವೆ ಹಾಲ್ ಮಾಲೀಕರಿಗೆ ಹಾಗೂ ಮದುವೆ ಆಯೋಜಕರಿಗೆ ಕೋವಿಡ್-19 ನಿಯಮಾನುಸಾರ ದಂಡ ವಿಧಿಸಬೇಕು. ಅವಶ್ಯವಿದ್ದಲ್ಲಿ ಪ್ರಕರಣ ದಾಖಲಿಸಲು ಸಂಬAಧಪಟ್ಟ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ದಂಡವನ್ನು ವಿಧಿಸುವುದು ಹಾಗೂ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಕಲಂ 51 ರಿಂದ 60, ಸಾಂಕ್ರಾಮಿಕ ರೋಗ ಕಾಯ್ದೆ, ಭಾರತೀಯ ದಂಡ ಸಂಹಿತೆ ಕಲಂ 188 ರಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

WhatsApp
error: Content is protected !!