ಮಾಜಿ ಸಿಎಂ ಸಿಧ್ಧರಾಮಯ್ಯ ಹೇಳಿಕೆ ಖಂಡಿಸಿ ಪ್ರತಿಭಟನೆ

ಕೊಪ್ಪಳ : ದಿ. ೦೯/೧೧/೨೦೨೧ ಬೆಳಗ್ಗೆ ೧೦:೩೦ ಘಂಟೆಗೆ ಕೊಪ್ಪಳದ ಅಶೋಕ ವೃತ್ತದಲ್ಲಿ ಭಾರತೀಯ ಜನತಾ ಪಾರ್ಟಿಯ ಎಸ್ಸಿ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷರಾದ ಸಣ್ಣ ಕನಕಪ್ಪ ಚಲವಾದಿ ಅವರ ನೇತೃತ್ವದಲ್ಲಿ ಇತ್ತೀಚೆಗೆ ಕಾಂಗ್ರೇಸ್ ಪಕ್ಷದ ವಿರೋದ ಪಕ್ಷದ ನಾಯಕರಾದ ಸಿಧ್ಧರಾಮಯ್ಯನವರು ದಲಿತರು ಹೊಟ್ಟೆಪಾಡಿಗಾಗಿ ಬಿಜೆಪಿ ಪಕ್ಷಕ್ಕೆ ಸೇರಿದ್ದಾರೆ ಎನ್ನುವ ಹಗುರವಾಗಿ ಹೇಳಿಕೆ ನೀಡಿದ್ದರ ವಿರೋಧವನ್ನು ಖಂಡಿಸಿ ಕೊಪ್ಪಳದ ಅಶೋಕ ವೃತ್ತದಲ್ಲಿ ಅವರ ವಿರುಧ್ಧ ಹೋರಾಟ ಹಮ್ಮಿಕೊಳ್ಳಲಾಗಿದೆ.
ಬಿಜೆಪಿ ಜಿಲ್ಲಾಧ್ಯಕ್ಷರಾದ ದೊಡ್ಡನಗೌಡ ಪಾಟೀಲ್ ,ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಹಾಲಪ್ಪ ಆಚಾರ್ ,ಸಂಸದರಾದ ಸಂಗಣ್ಣ ಕರಡಿ ಹಾಗೂ ಶಾಸಕರು ರವರು,ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಚಂದ್ರಶೇಖರ್ ಪಾಟೀಲ್ ಮತ್ತು ನವೀನ್ ಗುಳಗಣ್ಣನವರ್ ಹಾಗೂ ಜಿಲ್ಲೆಯ ಎಲ್ಲಾ ಮೋರ್ಚಾದ ಪದಾಧಿಕಾರಿಗಳು, ಎಸ್ಸಿ ಮೋರ್ಚಾದ ಜಿಲ್ಲಾ ಪದಾಧಿಕಾರಿಗಳು,ಕಾರ್ಯಕಾರಣಿ ಸದಸ್ಯರುಗಳು, ೮ ಮಂಡಲದ ಅಧ್ಯಕ್ಷರು,ಪ್ರ.ಕಾರ್ಯದರ್ಶಿಗಳು ಹಾಗೂ ಎಲ್ಲಾ ಸದಸ್ಯರುಗಳು ಕೊಪ್ಪಳ ಅಶೋಕ ವೃತ್ತದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಂಡು ಯಶಸ್ವಿಗೋಳಿಸಬೇಕೆಂದು ಎಂದು ಗಣೇಶ್ ಹೊರತಟ್ನಾಳ ಬಿಜೆಪಿ ಎಸ್ಸಿ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

WhatsApp
error: Content is protected !!