ಮೊರಾರ್ಜಿ ದೇಸಾಯಿ ಶಾಲೆಯ ವಿದ್ಯಾರ್ಥಿಗಳಿಗೆ ಕನ್ನಡಕ ವಿತರಣೆ

ಅಖಿಲ ವಾಣಿ ಸುದ್ದಿ
ಯಲಬುರ್ಗಾ: ತಾಲೂಕಿನ ಹಿರೇವಂಕಲಕುಂಟಾ ಗ್ರಾಮದಲ್ಲಿ ನಡೆಯುತ್ತಿರುವ ತಾಳಕೇರಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿನ ವಿದ್ಯಾರ್ಥಿಗಳಿಗೆ ಆರೋಗ್ಯ ಇಲಾಖೆ ವತಿಯಿಂದ ಉಚಿತವಾಗಿ ಕನ್ನಡಕವನ್ನು ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಟಿ.ಜಿ.ಘಾಟಗೆ ಶನಿವಾರ ವಿತರಿಸಿದರು.
ಬಳಿಕ ಮಾತನಾಡಿದ ಅವರು, ಗ್ರಾಮೀಣ ಭಾಗದಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಜಿಲ್ಲಾ ಅಂಧತ್ವ ವತಿಯಿಂದ ಮಕ್ಕಳಿಗೆ ಆರೋಗ್ಯದ ಹಿತ ದೃಷ್ಠಿಯಿಂದ ಚಾಳಿಸು ಹಂಚಿಕೆ ಮಾಡಲಾಗಿದೆ. ಹಳ್ಳಿಯಲ್ಲಿನ ಮಕ್ಕಳು ಸರಿಯಾಗಿ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಶಾಲೆಯಲ್ಲಿ ದೊರೆಯುವ ಉತ್ತಮವಾದ ಶಿಕ್ಷಣವನ್ನು ಪಡೆದು ವಿದ್ಯಾವಂತರಗಾಬೇಕು. ಸರಕಾರ ಶಾಲೆಗಳಿಗೆ ಸಾಕಷ್ಟು ರೀತಿಯಲ್ಲಿ ಮೂಲಭೂತ ಸೌಕಂi ಕಲ್ಪಿಸಲು ಮುಂದಾಗಿದ್ದು,ಪ್ರತಿಯೊಬ್ಬ ವಿದ್ಯಾರ್ಥಿಗಳು ಯೋಜನೆಗಳನ್ನು ಸದ್ಬಳಿಕೆ ಮಾಡಿಕೊಂಡು ಶಿಕ್ಷಣವಂತರಾಗಿ ಹೊರ ಹೊಮ್ಮುಬೇಕು ಎಂದು ತಿಳಿಸಿದರು.
ಈ ಸಂದರ್ಭ ಮುಖ್ಯ ಶಿಕ್ಷಕಿ ವೇದಾವತಿ, ಶಿಕ್ಷಕಿ ವೀಣಾ ಗೌಡರ, ನೇತ್ರಾಧಿಕಾರಿ ಸುನೀಲ್, ಆರೋಗ್ಯ ಇಲಾಖೆ ಸಿಬ್ಬಂದಿಗಳಾದ ಮಹೇಶ, ಭಾಗ್ಯಲಕ್ಷ್ಮೀ ಸೇರಿದಂತೆ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Please follow and like us:

Leave a Reply

Your email address will not be published. Required fields are marked *

WhatsApp
error: Content is protected !!