ಯೋಜನೆಗಳನ್ನು ಸರಿಯಾಗಿ ಬಳಸಿಕೊಳ್ಳಿ ಶಾಸಕ ಹಿಟ್ನಾಳ್

ಕೊಪ್ಪಳ: ಕಂದಾಯ ದಾಖಲೆಗಳು ಮನೆ ಬಾಗಿಲಿಗೆ ಯೋಜನೆಯ ಸೌಲಭ್ಯವನ್ನು ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಒದಗಿಸುವಂತೆ ಕೊಪ್ಪಳ ಶಾಸಕ ಕೆ.ರಾಘ ವೇಂದ್ರ ಹಿಟ್ನಾಳ್ ಹೇಳಿದರು.
ಕರ್ನಾಟಕ ಸರ್ಕಾರದ ಕಂದಾಯ ಇಲಾಖೆ ವತಿಯಿಂದ ಶನಿವಾರದಂದು ಕೊಪ್ಪಳ ತಾಲ್ಲೂಕಿನ ಓಜಿನಹಳ್ಳಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ “ಕಂದಾಯ ದಾಖಲೆಗಳು ಮನೆ ಬಾಗಿಲಿಗೆ” ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಕಂದಾಯ ದಾಖಲೆಗಳು ಮನೆ ಬಾಗಿಲಿಗೆ ಕಾರ್ಯಕ್ರಮಕ್ಕೆ ಚಾಲನೆ ಯಾವ ಗ್ರಾಮದಲ್ಲಿ ನೀಡಬೇಕು ಎಂದಾಗ ನಾವು ತಕ್ಷಣ ಆಯ್ಕೆ ಮಾಡಿಕೊಂಡಿದ್ದು, ಓಜಿನಹಳ್ಳಿ ಗ್ರಾಮವನ್ನು. ಈ ಗ್ರಾಮದಲ್ಲಿ ೬೨೭ ಖಾತೆದಾ ರರಿದ್ದು, ೪೦೬ ಜನರಿಗೆ ಪಹಣಿಯನ್ನು ಈ ಅಭಿಯಾನದಲ್ಲಿ ವಿತರಿಸಲಾಗುವುದು. ಪಾಹಣಿ, ನಕ್ಷೆ ಸಿಗುತ್ತಿಲ್ಲ ಎಂಬ ದೂರುಗಳು ಪ್ರತಿಗ್ರಾಮಗಳಿಂದ ಬರುತ್ತಿದ್ದವು. ಇಂತಹ ದೂರುಗಳನ್ನು ನಿವಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು “ಕಂದಾಯ ದಾಖಲೆಗಳು ಮನೆ ಬಾಗಿಲಿಗೆ” ಯೋಜನೆಯನ್ನು ಅನು ಷ್ಠಾನಗೊಳಿಸಿದೆ. ಇಂತಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಹೆಮ್ಮೆಯ ವಿಷಯ. ಸರ್ಕಾರದ ಯೋಜನೆಗಳನ್ನು ಗ್ರಾಮೀಣ ಭಾಗದ ಜನರ ಮನೆ-ಮನೆಗೆ ತಲುಪಿಸುವ ಜವಾಬ್ದಾರಿ ಅಧಿಕಾರಿಗಳ ಮೇಲಿದ್ದು, ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಈ ಕಾರ್ಯಕ್ರಮದಡಿ ಗ್ರಾಮಸ್ಥರು ತಾವು ಪಡೆದುಕೊಳ್ಳುವ ದಾಖಲೆಗಳಿಂದ ಸರ್ಕಾರದ ಯೋಜನೆಗಳನ್ನು ಸರಿಯಾಗಿ ಬಳಸಿಕೊಳ್ಳಿ. ಜಲಜೀವನ್ ಮಿಷನ್ ಯೋಜನೆಯ ಮೂಲಕ ಪ್ರತಿ ಮನೆಗೆ ಕುಡಿಯುವ ನೀರಿನ ಸೌಲಭ್ಯವನ್ನು ಸಹ ಪಡೆದುಕೊಳ್ಳಬೇಕು ಎಂದರು.
ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ಮಾತನಾಡಿ, ರೈತರ ಮನೆ ಬಾಗಿಲಿಗೆ ಉಚಿತವಾಗಿ ಕಂದಾಯ ಸೇವೆಗಳನ್ನು ತಲುಪಿಸಲು ರಾಜ್ಯ ಸರ್ಕಾರದ ನೂತನ ಯೋಜನೆಯಾದ “ಕಂದಾಯ ದಾಖಲೆ ಮನೆ ಬಾಗಿಲಿಗೆ” ಕಾರ್ಯಕ್ರಮದಡಿ ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿಯಾಗಿರುವ ರೈತರಿಗೆ ಪಹಣಿ, ಅಟ್ಲಾಸ್ (ನಕ್ಷೆ), ಆದಾಯ ಮತ್ತು ಜಾತಿ ಪ್ರಮಾಣ ಪತ್ರಗಳನ್ನು ಉಚಿತವಾಗಿ ತಲುಪಿಸಲಿಸಲಾಗುವುದು. ಗ್ರಾಮಸ್ಥರು ತಮ್ಮ ಗ್ರಾಮದ ಲೆಕ್ಕಾಧಿಕಾರಿಗಳ ಜೊತೆಗೆ ಸಹಕರಿಸಿ ಅವರಲ್ಲಿ ಈ ಎಲ್ಲಾ ದಾಖಲೆಗಳನ್ನು ಪಡೆಯಿರಿ. ತಾವು ಪಡೆದ ದಾಖಲೆಗಳಲ್ಲಿ ಯಾವುದೇ ಸಣ್ಣ ಪುಟ್ಟ ತಿದ್ದುಪಡಿ ಇದ್ದಲ್ಲಿ, ಅವುಗಳನ್ನು ಶೀಘ್ರದಲ್ಲೇ ಸರಿಪಡಿಸಿಕೊಳ್ಳಬಹುದು ಎಂದರು.
ಉಪವಿಭಾಗಾಧಿಕಾರಿ ಬಸವಣ್ಣೆಪ್ಪ ಕಲಶೆಟ್ಟಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಕಂದಾಯ ಇಲಾಖೆಯಿಂದ ಸಾರ್ವಜನಿಕರಿಗೆ ನೀಡುತ್ತಿರುವ ಮೂಲ ದಾಖಲೆಗಳಾದ ಪಹಣಿ, ಅಟ್ಲಾಸ್, ಆದಾಯ ಮತ್ತು ಜಾತಿ ಪ್ರಮಾಣ ಪತ್ರಗಳನ್ನು ರೈತರ ಮನೆ ಬಾಗಿಲಿಗೆ ಉಚಿತವಾಗಿ ತಲುಪಿಸಲು ರಾಜ್ಯ ಸರ್ಕಾರವು “ಕಂದಾಯ ದಾಖಲೆ ಮನೆ ಬಾಗಿಲಿಗೆ” ಎಂಬ ಯೋಜನೆಯನ್ನು ಹಮ್ಮಿ ಕೊಂಡಿದೆ. “ಅಲೆದಾಟ ಬೇಕಿಲ್ಲ, ಇಂದು ನಾಳೆ ಸುತ್ತಾಟವಿಲ್ಲ, ಬಂತು ನೋಡಿ ಮನೆ ಬಾಗಿಲಿಗೆ ದಾಖಲೆ”, “ನಿಮ್ಮ ದಾಖಲೆ ನಿಮ್ಮ ಹಕ್ಕು-ಮನೆ ಬಾಗಿಲಿಗೆ ತಲುಪಿ ಸುವುದು ನಮ್ಮ ಕರ್ತವ್ಯ”, “ರೈತಾಪಿ ಜನರ ಮನೆ ಬಾಗಿಲಿಗೆ ನಿಮ್ಮ ದಾಖಲೆ” ಎಂಬುದು ಈ ಕಾರ್ಯ ಕ್ರಮದ ಉದ್ದೇಶವಾಗಿದೆ ಎಂದರು.
ಕಾರ್ಯಕ್ರಮ ಅಧ್ಯಕ್ಷತೆಯನ್ನು ಓಜಿನಹಳ್ಳಿ ಗ್ರಾ.ಪಂ ಅಧ್ಯಕ್ಷೆ ಕಮಲವ್ವ ಬಸಪ್ಪ ಹರಿಜನ ಅವರು ವಹಿಸಿದ್ದರು. ಉಪಾಧ್ಯಕ್ಷ ಹುಚ್ಚಪ್ಪ ಯಮನಪ್ಪ ಭೋವಿ, ಪ್ರೊಬೇಷನರಿ ಐಎಎಸ್ ಅಧಿಕಾರಿ ಹೇಮಂತ್ ಕುಮಾರ್, ಕೊಪ್ಪಳ ತಹಶಿಲ್ದಾರ ಅಮರೇಶ್ ಬಿರಾದಾರ, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಮಲ್ಲಿಕಾರ್ಜುನ, ಜಿ.ಪಂ ಮಾಜಿ ಸದಸ್ಯರ ಪ್ರಸನ್ನ ಗಡಾದ್ ಸೇರಿದಂತೆ ಕಂದಾಯ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾ.ಪಂ ಸದಸ್ಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Please follow and like us:

Leave a Reply

Your email address will not be published. Required fields are marked *

WhatsApp
error: Content is protected !!