ರಾಜ್ಯದ 32ನೇ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಆಯ್ಕೆ..!

ಬೆಂಗಳೂರು: ಬಿಎಸ್ವೈ ರಾಜೀನಾಮೆಯಿಂದ ತೆರವಾಗಿದ್ದ ಸಿಎಂ ಸ್ಥಾನಕ್ಕೆ ರಾಜ್ಯದ 32ನೇ ಮುಖ್ಯಮಂತ್ರಿಯಾಗಿ ಶಿಗ್ಗಾವಿ ಶಾಸಕ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ.ಮಂಗಳವಾರ ರಾತ್ರಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಬೊಮ್ಮಾಯಿ ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ. ಬುಧವಾರವೇ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ. ಬಿ.ಎಸ್.ಯಡಿಯೂರಪ್ಪ ನವರ ಆಪ್ತವಲಯದಲ್ಲಿ ಗುರುತುಸಿಕೊಂಡಿದ್ದ ಬೊಮ್ಮಾಯಿ ಅವರಿಗೆ ಸಿಎಂ ಸ್ಥಾನ ಸಿಕ್ಕಿದ್ದು, ಬಿಎಸ್ವೈಗೆ ಬಿಜೆಪಿ ಹೈಕಮಾಂಡ್ ಬಹುಫರಾಕ್ ಎಂದಿದೆ. ಇದರಿಂದ ಬಿಎಸ್ವೈ ವಿರೋಧ ಬಣಕ್ಕೆ ಹೈಕಮಾಂಡ್ ಶಾಕ್ ನೀಡಿದೆ

Please follow and like us:

Leave a Reply

Your email address will not be published. Required fields are marked *

WhatsApp
error: Content is protected !!