ರಾಜ್ಯಾದ್ಯಂತ ನೈಟ್ ಕರ್ಪ್ಯೂ ಜಾರಿ : ಗಡಿ ಜಿಲ್ಲೆಗಳಲ್ಲಿ ವಿಕೆಂಡ್ ಕರ್ಪ್ಯೂ:ಸಿಎಂ ಬೊಮ್ಮಾಯಿ

ಕರೋನಾ ಹರಡುವುದನ್ನು ತಡೆಗಟ್ಟುವುದಕ್ಕಾಗಿ ರಾಜ್ಯಾದ್ಯಂತ ನೈಟ್ ಕರ್ಪ್ಯೂ ಮತ್ತು ಗಡಿ ಜಿಲ್ಲೆಗಳಲ್ಲಿ ವಿಕೆಂಡ್ ಕರ್ಪ್ಯೂ ಜಾರಿ ಮಾಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಗಡಿ ಜಿಲ್ಲೆಗಳಾದ ದ.ಕ., ಮೈಸೂರು, ಚಾಮರಾಜನಗರ, ಕೊಡಗು, ಬೆಳಗಾವಿ, ವಿಜಯಪುರ , ಬೀದರ್ ಕಲಬುರಗಿಯಲ್ಲಿ ವೀಕೆಂಡ್ ಕರ್ಪ್ಯೂ ಜಾರಿಗೊಳಿಸಲಾಗಿದೆ. ಕೊವಿಡ್ ಸ್ಥಿತಿಗತಿ ಕುರಿತು ಇಂದು ಛಿm ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಸಚಿವರು , ಕೋವಿಡ್ ಟಾಸ್ಕ್ ಫೋಸ್ ಮತ್ತು ವಿವಿಧ ಇಲಾಖೆ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿದ ಬಳಿಕ ಈ ಬಗ್ಗೆ ಮುಖ್ಯಮಂತ್ರಿ ಮಾಹಿತಿ ನೀಡಿದರು.
ಕೇರಳ, ಮಹಾರಾಷ್ಟ್ರ ಗಡಿ ಭಾಗದ ಜಿಲ್ಲೆಗಳಲ್ಲಿ ವಾರಾಂತ್ಯದ ಕರ್ಪ್ಯೂ ಜಾರಿ ಮಾಡಲಾಗುವುದು. ರಾಜ್ಯಾದ್ಯಂತ ನೈಟ್ ಕರ್ಪ್ಯೂ ಅವಧಿ ರಾತ್ರಿ ೯ ರಿಂದ ಬೆಳಗ್ಗೆ ೫ ರವರೆಗೆ ಜಾರಿಯಾಗಲಿದೆ ಎಂದು ಹೇಳಿದ್ದಾರೆ.

Please follow and like us:

Leave a Reply

Your email address will not be published. Required fields are marked *

WhatsApp
error: Content is protected !!