ಸಂಸದರ ಅಧ್ಯಕ್ಷತೆಯಲ್ಲಿ ೧ನೇ ತೈಮಾಸಿಕ ದಿಶಾ ಸಮಿತಿ ಸಭೆ

ಕೊಪ್ಪಳ:ಕೊಪ್ಪಳ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆ ಜಿಲ್ಲಾ ಆಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಇಂದು (ಜು. ೧೬) ನಡೆಯುತ್ತಿದ್ದು, ಸಭೆಯ ಅಧ್ಯಕ್ಷತೆಯನ್ನು ಸಂಸದ ಕರಡಿ ಸಂಗಣ್ಣ ಅವರ ವಹಿಸಿದ್ದಾರೆ.
ಸಭೆಯಲ್ಲಿ ೨೦೨೧-೨೨ನೇ ಸಾಲಿನ ೧ನೇ ತೈಮಾಸಿಕದ ಕೇಂದ್ರ ಹಾಗೂ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಯುತ್ತಿದೆ. ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪುರ, ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಫೌಜಿಯಾ ತರನುಮ್, ಅಪರ ಜಿಲ್ಲಾಧಿಕಾರಿ ಎಂ.ಪಿ. ಮಾರುತಿ. ಜಿ.ಪಂ ಉಪಕಾರ್ಯದರ್ಶಿ ಶರಣಬಸವರಾಜ, ಯೋಜನಾ ನಿರ್ದೇಶಕ ಟಿ.ಕೃಷ್ಣಮೂರ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಲಿಂಗರಾಜ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದಾರೆ.

Please follow and like us:

Leave a Reply

Your email address will not be published. Required fields are marked *

WhatsApp
error: Content is protected !!