ಸಚಿವ ಆನಂದ್ ಸಿಂಗ್ ರಾಜೀನಾಮೆ? ರಾಜ್ಯ ರಾಜಕಾರಣದಲ್ಲಿ ಮತ್ತೆ ಸಂಚಲನ

ಬೆಂಗಳೂರು: (ಆ.೧೦): ಸಚಿವರಿಗೆ ಖಾತೆ ಹಂಚಿಕೆ ಬೆನ್ನಲ್ಲೇ ಇದೀಗ ಅಸಮಾಧಾನ ಭುಗಿಲೆದಿದ್ದು, ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ರಾಜೀನಾಮೆ ಸುದ್ದಿ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ.
ತಾವು ಕೇಳಿದ್ದ ಖಾತೆ ನೀಡಲಿಲ್ಲ ಎಂಬ ಕಾರಣಕ್ಕೆ ಅಸಮಾಧಾನ ಹೊರಹಾಕಿದ್ದ ಸಚಿವ ಆನಂದ್ ಸಿಂಗ್ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಕೇವಲ ಸಚಿವ ಸ್ಥಾನಕ್ಕೆ ರಾಜೀನಾಮೆ ಮಾತ್ರವಲ್ಲ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಲಿದ್ದಾರೆ ಎಂದು ಆವರ ಆಪ್ತ ಮೂಲಗಳು ತಿಳಿಸಿವೆ.
ಇದಕ್ಕೆ ಪುಷ್ಠಿ ನೀಡುವಂತೆ ಆನಂದ್ ಸಿಂಗ್ ಇದುವರೆಗೂ ವಿಧಾನಸಭೆಗೆ ಕಾಲಿಟ್ಟಿಲ್ಲ. ಅಲ್ಲದೇ ವಿಜಯನಗರ ಶಾಸಕರ ಕಚೇರಿಯನ್ನು ಸಹ ಆನಂದ್ ಸಿಂಗ್ ಖಾಲಿ ಮಾಡಿದ್ದು, ಇಲ್ಲಿ ಶಾಸಕರು ಲಭ್ಯವಿಲ್ಲ ಎಂದು ಬೋರ್ಡ್ ಸಹ ಹಾಕಿದ್ದಾರೆ. ಇದು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ.
ಸಿಎಂಗೆ ರಾಜೀನಾಮೆ ಪತ್ರ?
ಮೊನ್ನೇ ಕುಟುಂಬ ಸಮೇತರಾಗಿ ಬಂದು ಭಾನುವಾರ ಬೆಳಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನ ಭೇಟಿ ಮಾಡಿದ್ದರು. ಸದ್ಯಕ್ಕೆ ಆಗೋಲ್ಲ. ಈ ಖಾತೆಯನ್ನೇ ನಿಭಾಯಿಸಿ. ಮುಂದೆ ನೋಡೋಣ. ಈಗ ನಿಮ್ಮ ಖಾತೆ ಬದಲಿಸಿದ್ರೆ ಇನ್ನುಳಿದವರೂ ಸಹ ತಮ್ಮ ಖಾತೆ ಬದಲಾವಣೆ ಮಾಡುವಂತೆ ಬರುತ್ತಾರೆ. ಹಾಗಾಗಿ ಈಗ ಖಾತೆ ಬದಲಾವಣೆ ಸಾಧ್ಯವಿಲ್ಲ ಎಂದು ಕಡ್ಡಿಮುರಿದಂತೆ ಹೇಳಿದ್ದಾರೆ. ಸಿಎಂ ಮಾತಿನಿಂದ ಬೇಸರಗೊಂಡ ಆನಂದ್ ಸಿಂಗ್ ಕವರ್‌ನಲ್ಲಿ ರಾಜೀನಾಮೆ ಪತ್ರ ನೀಡಿ ಬಂದಿದ್ದಾರೆ ಎನ್ನಲಾಗಿದೆ.
ಖಾತೆ ಬದಲಾವಣೆಗೆ ಬಗ್ಗೆ
ಎರಡು ದಿನ ಸಮಯ ಕೇಳಿದ್ದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಂದ ಸಕಾರಾತ್ಮಕ ಸ್ಪಂದನೆ ದೊರೆಯದ ಹಿನ್ನೆಲೆ ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನುತ್ತಿವೆ ಅವರ ಬೆಂಬಲಿಗರ ಅನಿಸಿಕೆಗಳು.
ಕಳೆದ ಹದಿನಾಲ್ಕ ವರ್ಷದಿಂದ ತಮ್ಮ ಹಳೇ ಮನೆಯನ್ನೇ ಶಾಸಕರ ಕಚೇರಿಯನ್ನಾಗಿ ಮಾಡಿದ್ದರು. ಇಂದು ಜೆಸಿಬಿ ಮೂಲಕ ಶಾಸಕರ ಕಚೇರಿ ಬೋರ್ಡ್ ತೆರವು ಮಾಡಿ ಕಚೇರಿ ಬಂದ್ ಮಾಡಲು ಮುಂದಾಗಿದ್ದಾರೆ. ಅಲ್ಲದೆ ಯಾರೂ ಈ ಕಡೆ ಬರದಂತೆ ಸೂಚಿಸಿದ್ದಾರಂತೆ.
ನಿನ್ನೆ ಎರಡು ಬಾರಿ ಮುಖ್ಯಮಂತ್ರಿಗಳು ಕರೆ ಮಾಡಿ ಕನ್ವೀನ್ಸ್ ಮಾಡಲು ಪ್ರಯತ್ನ ನಡೆಸಿದರೂ ಇದಕ್ಕೆ ಆನಂದ ಸಿಂಗ್ ಒಪ್ಪಿಲ್ಲವಂತೆ.
ಈ ಹಿಂದೆಯೂ ಸಮ್ಮಿಶ್ರ ಸರ್ಕಾರದಲ್ಲಿ ಮುಗನಿಸಿಕೊಂಡು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಆನಂದ ಸಿಂಗ್ ಅವರ ಈ ನಡೆಯಿಂದ ಬಿಜೆಪಿಯಲ್ಲಿ ಅತಂಕದ ಜೊತೆ ಭಿನ್ನಮತೀಯ ಚಟುವಟಿಕೆ ಜೋರಾಗುವ ಸಾಧ್ಯತೆ ಇದೆ.

Please follow and like us:

Leave a Reply

Your email address will not be published. Required fields are marked *

WhatsApp
error: Content is protected !!