ಸಮಾನ ಕೆಲಸ, ಸಮಾನ ಕೂಲಿ ಉದ್ದೇಶದಿಂದ ಮಹಿಳಾ ಕಾಯಕೋತ್ಸವ ಆಚರಣೆ : ಕೆ.ಎಂ.ಮಲ್ಲಿಕಾರ್ಜುನ

ಕೊಪ್ಪಳ : ಪುರುಷ ಮತ್ತು ಮಹಿಳೆಯರಿಗೆ ಸಮಾನ ಕೆಲಸ, ಸಮಾನ ಕೂಲಿ ಎಂಬ ಉದ್ದೇಶದಿಂದ ಸರ್ಕಾರ ನರೇಗಾ ಯೋಜನೆಯಲ್ಲಿ ಮಹಿಳಾ ಕಾಯಕೋತ್ಸವ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಿದ್ದು, ಮಹಿಳೆಯರು ಈ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಕೊಪ್ಪಳ ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಮಲ್ಲಿಕಾರ್ಜುನ ಹೇಳಿದರು.
ಮಂಗಳವಾರದಂದು(ಜು.೨೭) ತಾಲ್ಲೂಕಿನ ಕಲಕೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕಾಲುವೆ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಆಯೋಜಿಸಿದ್ದ ಮಹಿಳಾ ಕಾಯಕೋತ್ಸವ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ನರೇಗಾ ಯೋಜನೆಯಡಿ ಮಹಿಳೆಯರ ಭಾಗವಹಿಸುವಿಕೆ ಪ್ರಮಾಣವನ್ನು ಶೇ.೫ ರಷ್ಟು ಹೆಚ್ಚಿಸುವುದರ ಜೊತೆಗೆ ಮಹಿಳಾ ಪ್ರಧಾನ ಕುಟುಂಬಗಳನ್ನು ಗುರುತಿಸುವುದು, ಕಾಮಗಾರಿ ಸ್ಥಳಗಳನ್ನು ಮಹಿಳೆ ಮತ್ತು ಮಕ್ಕಳ ಸ್ನೇಹಿಯನ್ನಾಗಿ ಮಾಡುವ ಉದ್ದೇಶದಿಂದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮಹಿಳಾ ಕಾಯಕೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ.
ಕಳೆದ ೧೫ ವರ್ಷಗಳಿಂದ ಜಾರಿಗೆ ಬಂದ ನರೇಗಾ ಯೋಜನೆಯು ಕೇವಲ ಪುರುಷರು ಮಾತ್ರ ಭಾಗವಹಿಸುತ್ತಿದ್ದರು. ಇದರಿಂದ ಯೋಜನೆಯ ಲಾಭ ಮಹಿಳೆಯರಿಗೆ ತಲುಪುತ್ತಿರಲಿಲ್ಲ. ಯೋಜನೆಯಲ್ಲಿ ಪುರುಷ-ಮಹಿಳೆಯರಿಗೆ ಸಮಾನ ಕೆಲಸ ಸಮಾನ ಕೂಲಿ ಎಂಬ ಶೀರ್ಷಿಕೆ ಹೊತ್ತು ಬಂದ ಯೋಜನೆಯಲ್ಲಿ ಪ್ರತಿ ಮಹಿಳೆ ಯೋಜನೆಯಡಿ ಉದ್ಯೋಗ ಚೀಟಿ ಪಡೆದು ವೈಯಕ್ತಿಕ ಕಾಮಗಾರಿಗಳಾದ ಬದು ನಿರ್ಮಾಣ, ಕೃಷಿಹೊಂಡ, ತೋಟಗಾರಿಕೆ, ಅರಣ್ಯೀಕರಣ ಸಸಿ ನೆಡುವುದು, ದನದದೊಡ್ಡಿ, ಕುರಿದೊಡ್ಡಿ, ಮೇಕೆ ಶೆಡ್ ಮತ್ತು ಸಾಮುದಾಯಿಕ ಕಾಮಗಾರಿಗಳಾದ ಕೆರೆ ಹೂಳೆತ್ತುವುದು, ನಾಲಾ ಹೂಳೆತ್ತುವುದು, ಚೆಕ್ ಡ್ಯಾಂ ಹೂಳೆತ್ತುವುದು, ಕಾಲುವೆ ಹೂಳೆತ್ತುವುದು ಇತ್ಯಾದಿ ಕಾಮಗಾರಿಗಳಲ್ಲಿ ಕೂಲಿ ಕೆಲಸ ನಿರ್ವಹಿಸಿ ಪ್ರತಿ ದಿನಕ್ಕೆ ರೂ.೨೮೯/ ಕೂಲಿ ಮತ್ತು ಸಲಕರಣೆ ವೆಚ್ಚ ಪ್ರತಿ ದಿನಕ್ಕೆ ರೂ.೧೦/-ಒಟ್ಟು ರೂ.೨೯೯/- ಅಳತೆಗೆ ತಕ್ಕಂತೆ ಕೂಲಿ ಕೆಲಸ ನಿರ್ವಹಿಸಿ ಆರ್ಥಿಕವಾಗಿ ಸಬಲರಾಗಬಹುದು ಎಂದು ತಿಳಿಸಿದರು.
ಈಗಾಗಲೇ ಕಲಕೇರಿ ಗ್ರಾಮ ಪಂಚಾಯತಿಯಲ್ಲಿ ಮಹಿಳೆಯರ ಕುರಿತು ಮನೆ ಭೇಟಿ ಮೂಲಕ ಸಮೀಕ್ಷೆಯನ್ನು ಕೈಗೊಂಡಿದ್ದು, ಸಮೀಕ್ಷೆದಾರರು ಮನೆಗೆ ಬಂದ ಸಂದರ್ಭದಲ್ಲಿ ಪ್ರತಿ ಕುಟುಂಬದ ಮಹಿಳೆಯರು ನಿಖರವಾದ ಮಾಹಿತಿಯನ್ನು ನೀಡಿ ಯೋಜನೆಯಲ್ಲಿ ಭಾಗವಹಿಸಿ ಯೋಜನೆ ಸದುಪಯೋಗ ಪಡೆಯಬೇಕೆಂದು ಕರೆ ನೀಡಿದ ಅವರು, ಉದ್ಯೋಗ ಚೀಟಿಯಲ್ಲಿ ಸೇರ್ಪಡೆಯಾಗದ ಮಹಿಳೆಯರು ಇದ್ದಲ್ಲಿ ತಕ್ಷಣವೇ ಅವರ ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಸಂಖ್ಯೆ ಪಡೆದು ಅವರನ್ನು ಸಹ ನರೇಗಾ ಯೋಜನೆಯಲ್ಲಿ ಭಾಗವಹಿಸಲು ಅವಕಾಶ ನೀಡುವಂತೆ ಸಂಬಂಧಿಸಿದ ಪಂಚಾಯತಿ ಅಭಿವೃದ್ಧಿ ಅಧಿಕಾರಿಗೆ ಸೂಚಿಸಿದರು.
ಕಾರ್ಯಕ್ರಮದಲ್ಲಿ ಸಹಾಯಕ ನಿರ್ದೇಶಕರ(ಗ್ರಾಉ) ಸೌಮ್ಯ ಕೆ. ಜಿಲ್ಲಾ ಐಇಸಿ ಸಂಯೋಜಕ ಶ್ರೀನಿವಾಸ ಚಿತ್ರಗಾರ, ತಾಲೂಕ ಐಇಸಿ ಸಂಯೋಜಕ ದೇವರಾಜ ಪತ್ತಾರ, ಪಂಚಾಯತ ಅಭಿವೃದ್ಧಿ ಅಧಿಕಾರಿ ದಾನಪ್ಪ ಸಂಗಟಿ, ಕಾರ್ಯದರ್ಶಿ ಮಲ್ಲಿಕಾರ್ಜುನ, ಕೂಲಿಕಾರರು ಹಾಜರಿದ್ದರು.

Please follow and like us:

Leave a Reply

Your email address will not be published. Required fields are marked *

WhatsApp
error: Content is protected !!