ಸಾರ್ವಜನಿಕ ಸಭೆ, ಸಮಾರಂಭಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳ ಆದೇಶ


ಕೊಪ್ಪಳ, : ಕಳೆದ 15 ದಿನಗಳಿಂದ ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ಸತತವಾಗಿ ಏರಿಕೆಯಾಗುತ್ತಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಕೊಪ್ಪಳ ಜಿಲ್ಲೆಯಾದ್ಯಂತ ಮುಂಬರುವ ಯುಗಾದಿ, ಗುಡ್‌ಫ್ರೆöÊಡೇ ಹಬ್ಬಗಳ ಸಂದರ್ಭಗಳಲ್ಲಿ ಸಾರ್ವಜನಿಕ ಸ್ಥಳಗಳು, ಮೈದಾನ, ಉದ್ಯಾನವನಗಳು, ಮಾರುಕಟ್ಟೆಗಳು, ಧಾರ್ಮಿಕ ಪ್ರದೇಶಗಳು ಇತ್ಯಾದಿ ಪ್ರದೇಶಗಳಲ್ಲಿ ಸಾರ್ವಜನಿಕ ಸಭೆ, ಸಮಾರಂಭಗಳನ್ನು ನಡೆಸದಂತೆ ನಿರ್ಬಂಧಿಸಿ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ಆದೇಶ ಹೊರಡಿಸಿದ್ದಾರೆ.
 ಮಾರ್ಚ್ 25 ರಂದು ಹಬ್ಬಗಳ ಆಚರಣೆಯಲ್ಲಿ, ಸಾರ್ವಜನಿಕ ಸಭೆ ಸಮಾರಂಭಗಳಲ್ಲಿ ಪಾಲಿಸಬೇಕಾದ ಸುರಕ್ಷತಾ ಕ್ರಮಗಳ ಕುರಿತ ಆದೇಶವನ್ನು ಹಿಂಪಡೆದಿದ್ದು, ಪ್ರಸ್ತುತ ನಿರ್ಬಂಧದ ಆದೇಶವನ್ನು ಕಡ್ಡಾಯವಾಗಿ ಪಾಲಿಸುವಂತೆ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
 ಈ ಆದೇಶದ ಸಮರ್ಪಕ ಅನುಷ್ಠಾನಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಕೊಪ್ಪಳ ಉಪವಿಭಾಗಾಧಿಕಾರಿಗಳುಮ ಜಿಲ್ಲೆಯ ಎಲ್ಲ ತಹಶೀಲ್ದಾರರು, ಪೌರಾಯುಕ್ತರು, ಮುಖ್ಯಾಧಿಕಾರಿಗಳು ಹಾಗೂ ಜಿಲ್ಲೆಯ ಸಂಬAಧಪಟ್ಟ ಎಲ್ಲ ಇಲಾಖೆಗಳ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು. ಆದೇಶ ಉಲ್ಲಂಘಿಸಿದಲ್ಲಿ ಸಂಬAಧಿಸಿದವರ ವಿರುದ್ಧ ಭಾರತ ದಂಡ ಸಂಹಿತೆಯ ಕಲಂ 188 ಹಾಗೂ ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ 2020 ರ ವಿಭಾಗ 4, 5 ಮತ್ತು 10 ರಂತೆ ಕ್ರಮ ಜರುಗಿಸಲಾಗುವುದು ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

WhatsApp
error: Content is protected !!