ಸುಪ್ರೀಂ ಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಎನ್. ವಿ. ರಮಣ

ನವದೆಹಲಿ : ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ ಅವರು ಏಪ್ರಿಲ್ ೨೩ರಂದು ನಿವೃತ್ತಿಯಾಗಲಿದ್ದಾರೆ. ಹೀಗಾಗಿ ಇಂತಹ ಮುಖ್ಯ ನ್ಯಾಯಮೂರ್ತಿ ಸ್ಥಾನಕ್ಕೆ, ಹಿರಿಯ ನ್ಯಾಯಮೂರ್ತಿ ಎನ್.ವಿ.ರಮಣ ಅವರನ್ನು ನೇಮಕ ಮಾಡಿ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರು ಆದೇಶಿಸಿದ್ದಾರೆ.
ಈ ಹಿಂದೆ, ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ ಅವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದು, ಸುಪ್ರೀಂ ಕೋರ್ಟ್ ನ ಹಿರಿಯ ನ್ಯಾಯಮೂರ್ತಿ ಎನ್ ವಿ ರಮಣ ಅವರನ್ನು ಮುಂದಿನ ಸಿಜೆಐ ಆಗಿ ನೇಮಕ ಮಾಡುವಂತೆ ಶಿಫಾರಸು ಮಾಡುವಂತೆ ಪತ್ರದಲ್ಲಿ ಕೋರಿಕೊಂಡಿದ್ದರು.ಇದರ ಬೆನ್ನಲ್ಲೇ, ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಸುಪ್ರೀಂ ಕೋರ್ಟ್ ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಎನ್ ವಿ ರಮಣ ನೇಮಕ ಮಾಡಿ, ಆದೇಶಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

WhatsApp