ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ ವಿತರಣೆ

ಕೊಪ್ಪಳ : ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಬೆಂಗಳೂರು, ಜಿಲ್ಲಾ ಕೌಶಲ್ಯ ಮಿಷನ್ ಕೊಪ್ಪಳ, ಹಾಗೂ ಅಮರೇಶ್ವರ ಗ್ರಾಮೀಣಾಭಿವೃದ್ಧಿ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆ ಕೊಪ್ಪಳ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಮಂಗಳವಾರದಂದು ಮುಖ್ಯಮಂತ್ರಿ ಕೌಶಲ್ಯ ಕರ್ನಾಟಕ ಯೋಜನೆ (CMKKY) ಅಡಿಯಲ್ಲಿ ಕೊಪ್ಪಳದ ಅಮರೇಶ್ವರ ಕೌಶಲ್ಯ ತರಬೇತಿ ಕೇಂದ್ರದಲ್ಲಿ (AGSK Multi Skills Development Centre) ವಿವಿಧ ವೃತ್ತಿಗಳಲ್ಲಿ ಕೌಶಲ್ಯ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ (Welcome Kit) ವಿತರಣಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿಗಳಾದ ಪ್ರಾಣೇಶ್ ಕಾರ್ಯಕ್ರಮವನ್ನು ಉದ್ಘಾಟಿಸಿದರು ಇಲಾಖೆಯ ಸಂಯೋಜಕರಾದ ಪ್ರವೀಣ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.
ಅಮರೇಶ್ವರ ಸಂಸ್ಥೆಯ ಅಧ್ಯಕ್ಷ ಗಿರೀಶ್ ಕಣವಿ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಈ ಸಂದರ್ಭದಲ್ಲಿ ವಿವಿಧ ವೃತ್ತಿಗಳಲ್ಲಿ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಸಂಸ್ಥೆಯ ವತಿಯಿಂದ ಉಚಿತವಾಗಿ ಪಠ್ಯಪುಸ್ತಕ (Domain Theory, English, Soft Skills), ನೋಟ್ಬುಕ್, ಪೆನ್ನು, ಪೆನ್ಸಿಲ್ಲು ಹಾಗೂ ಆಯಾ ವೃತ್ತಿಗೆ ಬೇಕಾಗುವ ಕಲಿಕಾ ಸಾಮಗ್ರಿಗಳ ಒಳಗೊಂಡ ಬ್ಯಾಗನ್ನುವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಅಮರೇಶ್ವರ ಸಂಸ್ಥೆಯ ಎಲ್ಲಾ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Please follow and like us:

Leave a Reply

Your email address will not be published. Required fields are marked *

WhatsApp
error: Content is protected !!