ಜಿಲ್ಲೆಯಾದ್ಯಂತ ಧಾರ್ಮಿಕ ಸ್ಥಳಲ್ಲಿ ಸಾರ್ವಜನಿಕ ಪ್ರವೇಶ ನಿಷೇಧ

ಅಖಿಲ ವಾಣಿ ಸುದ್ದಿ
ಕೊಪ್ಪಳ, : ಜಿಲ್ಲೆಯಲ್ಲಿ ಸಾರ್ವಜನಿಕರ ಮತ್ತು ಭಕ್ತಾದಿಗಳ ಆರೋಗ್ಯದ ಹಿತದೃಷ್ಟಿಯಿಂದ ಕೋವಿಡ್-೧೯ ಹರಡದಂತೆ ತಡೆಯಲು ಮುಂಜಾಗ್ರತಾ ಕ್ರಮವಾಗಿ ವಿಪತ್ತು ನಿರ್ವಹಣಾ ಕಾಯ್ದೆ ೨೦೦೫ ಹಾಗೂ ದಂಡ ಪ್ರಕ್ರಿಯಾ ಸಂಹಿತೆ ೧೯೭೩ರ ಕಲಂ ೧೪೪ ರಡಿಯಲ್ಲಿ ಏ.೨೧ ರಿಂದ ಮೇ ೦೪ ರವರೆಗೆ ಜಿಲ್ಲೆಯಲ್ಲಿನ ಎಲ್ಲ ದೇವಸ್ಥಾನ, ಮಸೀದಿ, ದರ್ಗಾಗಳಿಗೆ ಸಾರ್ವಜನಿಕ ಪ್ರವೇಶವನ್ನು ನಿಷೇಧಿಸಿ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ಆದೇಶ ಹೊರಡಿಸಿದ್ದಾರೆ.
ಈ ಅವಧಿಯಲ್ಲಿ ದೇವಸ್ಥಾನ, ಮಸೀದಿ, ದರ್ಗಾದ ಆಡಳಿತ ಮಂಡಳಿಯವರು ಸದರಿ ಧಾರ್ಮಿಕ ಸ್ಥಳಗಳಲ್ಲಿ ನಡೆಯುವ ದಿನನಿತ್ಯದ ಧಾರ್ಮಿಕ ವಿಧಿ-ವಿಧಾನಗಳನ್ನು ಹಾಗೂ ಎಲ್ಲ ಮುಂಜಾಗ್ರತಾ ಕ್ರಮವನ್ನು ವಹಿಸಿ ನಡೆಸುವ ಷರತ್ತಿಗೊಳಪಟ್ಟು ವಿನಾಯಿತಿ ನೀಡಿದೆ. ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ೨೦೦೫ ಹಾಗೂ ಭಾರತೀಯ ದಂಡ ಸಂಹಿತೆ ೧೮೮ ರ ಪ್ರಕಾರ ಕ್ರಮ ಜರುಗಿಸಲಾಗುವುದು.
ಆದೇಶವನ್ನು ಜಾರಿಗೊಳಿಸಲು ದೇವಸ್ಥಾನ, ಮಸೀದಿ, ದರ್ಗಾದ ಆಡಳಿತ ಮಂಡಳಿಗಳು, ಜಿಲ್ಲಾ ಪೊಲೀಸ್ ಅಧೀಕ್ಷಕರು, ಉಪವಿಭಾಗಾಧಿಕಾರಿಗಳು, ಜಿಲ್ಲೆಯ ಎಲ್ಲ ತಹಶೀಲ್ದಾರರು ಮತ್ತು ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಸಂಬಂಧಪಟ್ಟ ಎಲ್ಲ ಇಲಾಖೆಗಳ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

WhatsApp
error: Content is protected !!