೧೨ನೇ ತರಗತಿಯ ಪರೀಕ್ಷೆ ರದ್ದು: ಕೇಂದ್ರ
ಹೊಸದಿಲ್ಲಿ: ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ವರ್ಷ ಸಿಬಿಎಸ್ ಇ ೧೨ನೇ ತರಗತಿಯ ಮಂಡಳಿ ಪರೀಕ್ಷೆಗಳನ್ನು ರದ್ದು ಮಾಡಲು ನಿರ್ಧರಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರದ ಸಭೆ ಬಳಿಕ ಹೇಳಿದ್ದಾರೆ.
ಕೋವಿಡ್-೧೯ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.”ವ್ಯಾಪಕವಾದ ಸಮಾಲೋಚನೆಗಳ ನಂತರ, ನಾವು ವಿದ್ಯಾರ್ಥಿ-ಸ್ನೇಹಿ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ. ಈ ನಿರ್ಧಾರವು ನಮ್ಮ ದೇಶದ ಯುವಕರ ಆರೋಗ್ಯ ಹಾಗೂ ಭವಿಷ್ಯವನ್ನು ಕಾಪಾಡುತ್ತದೆ” ಎಂದು ಪ್ರಧಾನಿ ಹೇಳಿದ್ದಾರೆ.
ಉನ್ನತ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಪ್ರಧಾನಿ ಈ ನಿರ್ಧಾರತೆಗೆದು ಕೋಂಡರು. ಸಭೆಯಲ್ಲಿ ಕೇಂದ್ರ ಸಚಿವರಾದ ಅಮಿತ್ ಶಾ, ಪ್ರಕಾಶ್ ಜಾವಡೇಕರ್ ಹಾಗೂ ಪಿಯೂಷ್ ಗೋಯಲ್ ಉಪಸ್ಥಿತರಿದ್ದರು.

Please follow and like us:

Leave a Reply

Your email address will not be published. Required fields are marked *

WhatsApp
error: Content is protected !!