ಕೊರೋನಾದಿಂದ ಅನಾಥರಾದ ವಿದ್ಯಾರ್ಥಿಗಳಿಗೆ ವಿಶೇಷ ವಿದ್ಯಾರ್ಥಿ ವೇತನ ನೀಡಲಿ: ನಾಸಿರ್ ಉಡುಪಿ
ಕೊಪ್ಪಳ : ರಾಜ್ಯದಲ್ಲಿ ಕೊರೋನಾ ಸೋಂಕು ತಗುಲಿ ಅನೇಕ ಮಕ್ಕಳು/ವಿದ್ಯಾರ್ಥಿಗಳು ತಮ್ಮ ಪೋಷಕರನ್ನು ಕಳೆದುಕೊಂಡು ಅನಾಥರಾಗಿದ್ದಾರೆ ಹಾಗೂ ರಾಜ್ಯಾದ್ಯಂತ ಲಾಕ್ ಡೌನ್ ವಿಧಿಸಿದ್ದ ಕಾರಣದಿಂದಾಗಿ ಬಹುತೇಕ ಜನರು ಉದ್ಯೋಗವನ್ನು ಕಳೆದುಕೊಂಡಿದ್ದಾರೆ. ಇನ್ನೂ ಕೆಲವರು ಸರಿಯಾಗಿ ಸಂಬಳ ಸಿಗದೆ ಸಾಲ ಮಾಡಿ ಸಂಸಾರವನ್ನು ನಡೆಸುವಂತಹ ದುಸ್ಥಿತಿ ಉಂಟಾಗಿದೆ ಇದರ ನಡುವೆ ಆರ್ಥಿಕ ಸಂಕದಿಂದ ಅನೇಕ ಕುಟುಂಬಗಳು ಪ್ರಸಕ್ತ ಶೈಕ್ಷಣಿಕ ಸವಾಲುಗಳನ್ನು ಎದುರಿಸುವಂತಾಗಿದೆ ಎಂದು ಎಸ್.ಐ.ಓ. ಸಂಘಟನೆಯ ರಾಜ್ಯ ಕಾರ್ಯದರ್ಶಿ ನಾಸಿರ್ ಉಡುಪಿ ಅವರು ಹೇಳಿದರು.ಅವರು ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡುತ್ತಿದ್ದರು. ಸಂಪೂರ್ಣ ಶಿಕ್ಷಣ ವ್ಯವಸ್ಥೆ ಕೊರೋನಾ ಸಾಂಕ್ರಾಮಿಕ ರೋಗದ ಪ್ರಭಾವಕ್ಕೆ ಒಳಗಾಗಿದ್ದು ಇದರಿಂದ ಪ್ರಮುಖವಾಗಿ ಮಕ್ಕಳ/ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪ್ರತಿಕೂಲ ಪರಿಣಾಮ ಬೀರಿದೆ, ರಾಜ್ಯದಲ್ಲಿ ಈಗಾಗಲೇ ಹತ್ತನೇ ತರಗತಿಯ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು ಪ್ರಸ್ತುತ ಬಹುತೇಕ ಶಾಲಾ-ಕಾಲೇಜುಗಳಲ್ಲಿ ಪ್ರವೇಶ ಪ್ರಕ್ರಿಯೆಗಳು ಪ್ರಾರಂಭವಾಗಿವೆ ಆದರೆ ಆರ್ಥಿಕ ಸಂಕ?ದಿಂದಾಗಿ ಅನೇಕ ಪ್ರತಿಭಾವಂತ ವಿದ್ಯಾರ್ಥಿಗಳು ಶಿಕ್ಷಣವನ್ನು ಅರ್ಧಕ್ಕೆ ಮೊಟಕುಗೊಳಿಸುವ ಆಘಾತಕಾರಿ ಘಟನೆಗಳು ಬೆಳಕಿಗೆ ಬರುತ್ತಿವೆ. ಶಿಕ್ಷಣವು ಸಂವಿಧಾನದ ಮೂಲಭೂತ ಹಕ್ಕುಗಳಲ್ಲಿ ಒಂದಾಗಿದ್ದು ಆರ್ಥಿಕ ಸಂಕ?ದಿಂದ ಯಾವುದೇ ವಿದ್ಯಾರ್ಥಿಯು ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಪ್ರಸ್ತುತ ಅತ್ಯಂತ ಅಗತ್ಯವಾಗಿರುವ ಈ ಕೆಳಗಿನ ಎರಡು ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ವಿದ್ಯಾರ್ಥಿಗಳ ಪರವಾಗಿ ನಾವು ಆಗ್ರಹಿಸುತ್ತಿದ್ದೆವೆ.
ಲಾಕ್ ಡೌನ್ ನಿಂದಾಗಿ ಅನೇಕ ಪೋ?ಕರು ಎದುರಿಸುತ್ತಿರುವ ಆರ್ಥಿಕ ಸಂಕ?ದ ಹಿನ್ನೆಲೆಯಲ್ಲಿ ಪ್ರಾಥಮಿಕ ಶಿಕ್ಷಣದಿಂದ ಸ್ನಾತಕೋತ್ತರ ಪದವಿ ಶಿಕ್ಷಣದ ವಿದ್ಯಾರ್ಥಿಗಳಿಗೆ ಪ್ರಸಕ್ತ ಶೈಕ್ಷಣಿಕ ವ?ದಿಂದ ಮುಂದಿನ ಶೈಕ್ಷಣಿಕ ವ?ದ ವರೆಗೂ ರಾಜ್ಯದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಎಲ್ಲ ಶಾಲಾ-ಕಾಲೇಜುಗಳಲ್ಲಿ ಪ್ರವೇಶ ಶುಲ್ಕದ ಒಟ್ಟು ವಾರ್ಷಿಕ ಶುಲ್ಕ ಮತ್ತು ಪರೀಕ್ಷಾ ಶುಲ್ಕದ ಶೇ ೫೦% ಪ್ರತಿಶತ ದ? ಹಣವನ್ನು ಕಡಿತಗೊಳಿಸಬೇಕು ಹಾಗೂ ಶುಲ್ಕವನ್ನು ಮೂರು ಕಂತುಗಳಲ್ಲಿ ಭರಿಸಲು ಪೋ?ಕರಿಗೆ ಅವಕಾಶ ನೀಡಬೇಕು.
ಸರ್ಕಾರ ಸೂಕ್ತ ತುರ್ತು ಕ್ರಮ ಕೈಗೊಂಡು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಅನುಕೂಲ ಮಾಡಿಕೊಡುವ ಬಗ್ಗೆ ಅಧಿಕೃತವಾಗಿ ಆದೇಶವನ್ನು ಹೊರಡಿಸಬೇಕೆಂದು ರಾಜ್ಯದ ವಿದ್ಯಾರ್ಥಿಗಳ ಪ್ರತಿನಿಧಿಯಾಗಿ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಜೇ?ನ್ ಆಫ್ ಇಂಡಿಯಾ ಆಗ್ರಹಿಸುತ್ತದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ಇಲಿಯಾಸ್ ನಾಲಬಂದ್, ಘಟಕ ಅದ್ಯಕ್ಷ ಅಧ್ಯಕ್ಷ ಅಪ್ರೋಜ್ ಅಹ್ಮದ್, ಮಾಜಿ ಜಿಲ್ಲಾ ಅಧ್ಯಕ್ಷ ಜಕ್ರೀಯ ಖಾನ್ ಮತ್ತು ಘಟಕ ಕಾರ್ಯದರ್ಶಿ ಎಂ.ಡಿ. ಅಖೀಲ್ ಉಡೇವು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.