ಕೊಪ್ಪಳ : ”ಸದ್ಭಾವನಾ ದಿನ”ದ ಅಂಗವಾಗಿ ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು (ಆ.20) ಪ್ರತಿಜ್ಞಾವಿಧಿಯನ್ನು ಸ್ವೀಕರಿಸಲಾಯಿತು.  
ಎಲ್ಲಾ ಧರ್ಮ, ಭಾಷೆ ಹಾಗೂ ರಾಜ್ಯಗಳ ಜನರಲ್ಲಿ ಸೌಹಾರ್ದತೆಯನ್ನು ಉತ್ತೇಜಿಸಿ, ಎಲ್ಲರಲ್ಲೂ ಸದ್ಭಾವನೆಯನ್ನು ಮೂಡಿಸಿ, ಹಿಂಸಾಚಾರವನ್ನು ತ್ಯಜಿಸುವಂತೆ ಮಾಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಆದೇಶದನ್ವಯ ಪ್ರತಿವರ್ಷದಂತೆ ಈ ವರ್ಷವೂ ಸಹ “ಸದ್ಭಾವನಾ ದಿನ’’ವನ್ನು ಜಿಲ್ಲಾಡಳಿತದ ವತಿಯಿಂದ ಶುಕ್ರವಾರದಂದು ಆಚರಿಸಲಾಯಿತು.  
ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ ದೇಸಾಯಿ ಅವರು ಪ್ರತಿಜ್ಞಾವಿಧಿಯನ್ನು ಬೋಧಿಸಿದರು.  ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಅಪರ ಜಿಲ್ಲಾಧಿಕಾರಿ ಎಂ.ಪಿ ಮಾರುತಿ, ಉಪವಿಭಾಗಾಧಿಕಾರಿ ನಾರಾಯಣರೆಡ್ಡಿ ಕನಕರೆಡ್ಡಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಗಂಗಪ್ಪ, ಜಂಟಿ ಕೃಷಿ ನಿರ್ದೇಶಕ ಸದಾಶಿವ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಿ.ಎಂ ದೊಡ್ಡಮನಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ನವೀನ್ ಸಿಂತ್ರೆ, ಪಶು ಇಲಾಖೆ ಉಪನಿರ್ದೇಶಕ ಹೆಚ್.ನಾಗರಾಜ, ಸೇರಿದಂತೆ ವಿವಿಧ ಇಲಾಖೆಗಳ ಹಾಗೂ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.

Please follow and like us:

Leave a Reply

Your email address will not be published. Required fields are marked *

WhatsApp
error: Content is protected !!