ನಾಳೆ ನಗರಕ್ಕೆ ಮುಖ್ಯಮಂತ್ರಿಗಳ ಆಗಮನ

ಕೊಪ್ಪಳ: ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ನವೆಂಬರ್ ೧೮ ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಮುಖ್ಯಮಂತ್ರಿಗಳು ನ. ೧೮ ರಂದು ಬೆಳಿಗ್ಗೆ ೧೦-೩೦ ಗಂಟೆಗೆ ಬೆಂಗಳೂರಿನ ಎಚ್.ಎ.ಎಲ್ ವಿಮಾನ ನಿಲ್ದಾಣದಿಂದ ನಿರ್ಗಮಿಸಿ ವಿಶೇ? ವಿಮಾನದ ಮೂಲಕ ಬೆಳಿಗ್ಗೆ ೧೧-೩೦ ಗಂಟೆಗೆ ಕೊಪ್ಪಳ ತಾಲ್ಲೂಕಿನ ಗಿಣಿಗೇರಾ ಏರ್‌ಸ್ಟ್ರಿಪ್(ಎಂ.ಎಸ್.ಪಿ.ಎಲ್ ವಿಮಾನ ನಿಲ್ದಾಣ) ಗೆ ಆಗಮಿಸುವರು. ಬೆಳಿಗ್ಗೆ ೧೧-೩೫ ಗಂಟೆಗೆ ಗಿಣಿಗೇರಾ ಏರ್‌ಸ್ಟ್ರಿಪ್‌ನಿಂದ ನಿರ್ಗಮಿಸಿ ರಸ್ತೆ ಮಾರ್ಗವಾಗಿ ೧೧-೪೫ಕ್ಕೆ ಕೊಪ್ಪಳ ತಾಲ್ಲೂಕಿನ ಕ್ರೀಡಾಂಗಣಕ್ಕೆ ಆಗಮಿಸಿ ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ ೦೨ ಗಂಟೆಗೆ ಕಾರ್ಯಕ್ರಮ ಕಾಯ್ದಿರಿಸಲಾಗಿದೆ.
ಮಧ್ಯಾಹ್ನ ೦೨-೩೦ ಗಂಟೆಗೆ ತಾಲ್ಲೂಕು ಕ್ರೀಡಾಂಗಣದಿಂದ ನಿರ್ಗಮಿಸಿ ಮಧ್ಯಾಹ್ನ ೦೨-೪೫ ಗಂಟೆಗೆ ಗಿಣಿಗೇರಾಕ್ಕೆ ಆಗಮಿಸಿ, ಗಿಣಿಗೇರಾ ಏರ್‌ಸ್ಟ್ರಿಪ್‌ನಿಂದ ವಿಶೇ? ವಿಮಾನದ ಮೂಲಕ ಬೆಂಗಳೂರು ಕಡೆಗೆ ಪ್ರಯಾಣ ಬೆಳೆಸುವರು ಎಂದು ಮುಖ್ಯಮಂತ್ರಿಯವರ ವಿಶೇ? ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ ಸರ್ಕಾರದ ಜಂಟಿ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

WhatsApp
error: Content is protected !!