ಶ್ರೀ ಹುಲಿಗೆಮ್ಮದೇವಿ ದಸರಾ ಮಹೋತ್ಸವಕ್ಕೆ ಚಾಲನೆ


ಕೊಪ್ಪಳ : ಕೊಪ್ಪಳ ಜಿಲ್ಲೆಯ ಸುಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹುಲಿಗಿ ಗ್ರಾಮದ ಶ್ರೀ ಹುಲಿಗೆಮ್ಮ ದೇವಿ ದಸರಾ ಮಹೋತ್ಸವ-೨೦೨೨ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಶ್ರೀ ಹುಲಿಗೆಮ್ಮ ದೇವಿ ದಸರಾ ಮಹೋತ್ಸವವನ್ನು ಸೆ. ೨೬ ರಿಂದ ಅಕ್ಟೋಬರ್ ೦೫ ರವರೆಗೆ ಹಮ್ಮಿಕೊಳ್ಳಲಾಗಿದ್ದು, ದೇವಸ್ಥಾನದ ಆವರಣದಲ್ಲಿ ಸೋಮವಾರದಂದು ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಹಲವು ಗಣ್ಯರಿಂದ ಚಾಲನೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ವಿಶೇ? ಆಹ್ವಾನಿತರಾಗಿ ಮತ್ತು ವಿಶೇ? ಗೌರವ ಪುರಸ್ಕೃತರಾಗಿ “ಪದ್ಮಶ್ರೀ” ಪ್ರಶಸ್ತಿ ಪುರಸ್ಕೃತರು ಹಾಗೂ ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷರಾದ ಡಾ. ಜೋಗತಿ ಮಂಜಮ್ಮ ಅವರು ಆಗಮಿಸಿದ್ದರು. ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸಂಸದ ಕರಡಿ ಸಂಗಣ್ಣ, ವಿಧಾನ ಪರಿ?ತ್ ಸದಸ್ಯೆ ಹೇಮಲತಾ ನಾಯಕ, ಶ್ರೀ ಹುಲಿಗೆಮ್ಮದೇವಿ ದೇವಸ್ಥಾನದ ಆಡಳಿತಾಧಿಕಾರಿಗಳು ಹಾಗೂ ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ.ಕಡಿ ಮತ್ತು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಸೇರಿದಂತೆ ಹಲವು ಮುಖಂಡರು, ಜನಪ್ರತಿನಿಧಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

Please follow and like us:

Leave a Reply

Your email address will not be published. Required fields are marked *

WhatsApp
error: Content is protected !!